ಮಾಜಿ ಶಾಸಕ ಕೃಷ್ಣಾರೆಡ್ಡಿ ವಿರುದ್ಧ ಪ್ರಕರಣಕ್ಕೆ ‘ಹೈ’ ತಡೆ

highcourt
Published on

ಬೆಂಗಳೂರು: ಮಾಜಿ ಶಾಸಕ ಜೆಡಿಎಸ್‌ನ ಎಂ. ಕೃಷ್ಣಾರೆಡ್ಡಿ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.


ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೃಷ್ಣಾರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು.


ಅರ್ಜಿದಾರರ ಕೋರಿಕೆಯಂತೆ ಮುಂದಿನ ವಿಚಾರಣೆವರೆಗೆ ಪ್ರಕರಣದ ಪ್ರಕ್ರಿಯೆಗೆ ತಡೆ ನೀಡಲಾಗಿದೆ. ಅರ್ಜಿದಾರರು ಬಳಸಿರುವ ಪದಗಳು ಸೆಕ್ಷನ್ 499ರ ಅನ್ವಯ ಮಾನಹಾನಿ ವ್ಯಾಖ್ಯಾನದ ವ್ಯಾಪ್ತಿಗೆ ಒಳಪಡುವುದಿಲ್ಲ. ಸೆಕ್ಷನ್ 500ರ ಬಳಕೆ ಕುರಿತಾಗಿ ಅನುಮಾನ ಎಂದು ಈ ಪರಿಹಾರ ಒದಗಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net