ಘನತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಿಮಿನಲ್ ಕ್ರಮ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

Untitled design - 2023-09-11T162819.346
Published on

ಬೆಂಗಳೂರು: ರಾಜ್ಯದಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಿ ಎಂದು ಉಚ್ಚ ನ್ಯಾಯಾಲಯ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚನೆ ನೀಡಿದೆ.

ಘನತ್ಯಾಜ್ಯ ನಿರ್ವಹಣೆ ಸಂಬಂಧ ಪಿಐಎಲ್​ಗಳ ವಿಚಾರಣೆ ವೇಳೆ ಸೂಚನೆ ನೀಡಿದ ರಾಜ್ಯ ಹೈಕೋರ್ಟ್, ಘನತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಿ ಮತ್ತು ಸೂಕ್ತ ಕ್ರಮ ಜರುಗಿಸಬೇಕು ಎಂದು ತಿಳಿಸಿದೆ.

ಘನತ್ಯಾಜ್ಯ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿತ್ತು. ಈ ವೇಳೆ ಪದೇ ಪದೇ ನಿಯಮ‌ ಉಲ್ಲಂಘಿಸುವವರಿಗೆ ದಂಡದ ಜತೆಗೆ ಕ್ರಿಮಿನಲ್ ಪ್ರಕರಣ ಕೂಡ ದಾಖಲು ಮಾಡಿ ಎಂದು ಉಚ್ಚ ನ್ಯಾಯಾಲಯ ಪಾಲಿಕೆಗೆ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net