ಇಂದು ಸುಪ್ರೀಂನಲ್ಲಿ ಹಿಜಾಬ್​ ಕೇಸ್​ ವಿಚಾರಣೆ

Hijab Ban
Published on

ನವದೆಹಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿದ್ದ ಕರ್ನಾಟಕ ಸರ್ಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಸೋಮವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ.

ನೂತನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಯು.ಯು. ಲಲಿತ್​ ಅವರ ಮೊದಲ ಕೆಲಸದ ದಿನವಾದ ಸೋಮವಾರವೇ ಈ ಮಹತ್ವದ ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿಗಳಾದ ಹೇಮಂತ್​ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿರುವ ನ್ಯಾಯ ಪೀಠ ವಿಚಾರಣೆ ನಡೆಸಲಿದೆ.

ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ಅಂದಿನ ಸಿಜೆಐ ಎನ್​.ವಿ. ರಮಣ ಹಲವು ಬಾರಿ ಸೂಚಿಸಿದ್ದರು. ಆದರೆ ಈ ಪ್ರಕರಣ ವಿಚಾರಣೆಗೆ ಲಿಸ್ಟ್​ ಆಗಿರಲಿಲ್ಲ. ಸರ್ಕಾರಿ ಅಧಿಕಾರಿಗಳ ಮಲತಾಯಿ ಧೋರಣೆಯಿಂದಾಗಿ ವಿದ್ಯಾರ್ಥಿಗಳ ನಂಬಿಕೆಯ ಆಚರಣೆಗೆ ಅಡ್ಡಿಯಾಗಿದೆ. ಇದರಿಂದ ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾಗಿದೆ ಎಂದು ಒಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net