ಮುಂದಿನ ದಿನಗಳಲ್ಲಿ ಬಸವಕಲ್ಯಾಣದಿಂದ ಪಾದಯಾತ್ರೆ

kodihalli
ಎಚ್.ಎಸ್.ರುದ್ರಪ್ಪ ನೆನಪಿನ ಕಾರ್ಯಕ್ರಮವನ್ನು ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ಕೋಡಿಹಳ್ಳಿ ಚಂದ್ರಶೇಖರ್, ಎ.ಡಿ.ಶಿವಪ್ಪ, ಮಂಜುನಾಥ ಗೌಡ, ಮಲ್ಲನಗೌಡ ಪಾಟೀಲ್, ಎನ್.ಉಮೇಶ್ ಪಾಟೀಲ್, ವೈ.ಎಚ್.ನಾಗರಾಜ್ ಮುಂತಾದವರಿದ್ದರು.
Published on

ಶಿವಮೊಗ್ಗ: ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಬಸವಕಲ್ಯಾಣದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುವುದು. ಇದರಲ್ಲಿ ಕನಿಷ್ಠ ಒಂದು ಲಕ್ಷ ರೈತರು ಭಾಗವಹಿಸಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಮಂಗಳವಾರ ಏರ್ಪಡಿಸಿದ್ದ ರೈತ ಸಂಘದ ಸಂಸ್ಥಾಪಕ ಎಚ್.ಎಸ್.ರುದ್ರಪ್ಪ ನೆನಪಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳಿಗೆ ಅಧಿಕಾರ ಹಿಡಿಯಲು ಮಾತ್ರ ರೈತರು ಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಬೇಕೆಂಬ ಕನಿಷ್ಠ ಸೌಜನ್ಯ, ಬದ್ಧತೆ ಅಧಿಕಾರ ನಡೆಸುವವರಿಗೆ ಇಲ್ಲ. ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಕೃಷಿ ಉತ್ಪನ್ನಗಳ ಬೆಲೆ ಕುಸಿದಿದೆ. ಹೀಗಾಗಿ ರೈತ ಆತ್ಮಹತ್ಯೆ ಹಾದಿ ಹಿಡಿದಿದ್ದಾನೆ. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕೆಂದು ಕೃಷಿ ವಿಜ್ಞಾನಿ ಡಾ.ಎಂ.ಸ್ವಾಮಿನಾಥನ್ ನೀಡಿದ ವರದಿ ದಶಕಗಳು ಕಳೆದರೂ ಜಾರಿಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಮನಸ್ಸು ಮಾಡಿದರೆ ಅಧಿಕಾರ ಪಡೆಯುವುದು ಕಷ್ಟದ ಕೆಲಸವಲ್ಲ. ಆದರೆ ನಮ್ಮ ನಡುವೆ ಕೆಲವೂ ಗೊಂದಲಗಳಿವೆ. ಮುಖ್ಯವಾಗಿ ರೈತರು ಚುನಾವಣೆ ಸಂದರ್ಭದಲ್ಲಿ ಬೇರೆಬೇರೆ ಕಾರಣಗಳಿಗೆ ವಿವಿಧ ರಾಜಕೀಯ ಪಕ್ಷಗಳನ್ನು ಗೆಲ್ಲಿಸುತ್ತಾರೆ. ಆದರೆ ನಮ್ಮಿಂದ ಅಧಿಕಾರ ಪಡೆದವರು ಮಾತ್ರ ಸ್ಪಂದಿಸುವುದಿಲ್ಲ ಎಂದು ಹೇಳಿದರು.

ಸಾಣೇಹಳ್ಳಿ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎನ್.ಕೆ. ಮಂಜುನಾಥಗೌಡ, ಉಪಾಧ್ಯಕ್ಷ ಎನ್.ಉಮೇಶ್ ಪಾಟೀಲ್, ಜಿಲ್ಲಾಧ್ಯಕ್ಷ ಮಂಜುನಾಥ್, ಬಿಎಸ್‌ಪಿ ರಾಜ್ಯಾಧ್ಯಕ್ಷ ಎ.ಡಿ.ಶಿವಪ್ಪ, ಪ್ರಮುಖರಾದ ವೈ.ಎಚ್.ನಾಗರಾಜ್, ಭಕ್ತರಹಳ್ಳಿ ಬೈರೇಗೌಡ, ಹನುಮಂತಪ್ಪ, ಮಲ್ಲನಗೌಡ ಪಾಟೀಲ್, ವೀರಣ್ಣ, ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net