ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಕೆಲಕಾಲ ವಾಹನ ಸಂಚಾರ ಸ್ಥಗಿತ

24 Ckm Charmadi
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದ್ದ ಸ್ಥಳ.
Published on

ಬಣಕಲ್: ಚಾರ್ಮಾಡಿ ಘಾಟ್‌ನ ಬಿದಿರುತಳ ಹಾಗೂ ಆಲೇಕಾನ್ ಮಾರ್ಗ ಮಧ್ಯೆ ಗುಡ್ಡ ಕುಸಿದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಕೆಲವು ದಿನಗಳಿಂದ ಈ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಗುಡ್ಡದ ಮಣ್ಣು ರಸ್ತೆಗೆ ಜರಿದಿದ್ದರಿಂದ ಸಂಚಾರಕ್ಕೆ ಅಡಚಣೆಯಾಯಿತು. ಈ ರಸ್ತೆಯ ಬಲಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದರಿಂದ ರಸ್ತೆಯಲ್ಲಿ ಒಂದೇ ವಾಹನ ಸಂಚರಿಸುವಷ್ಟು ಜಾಗ ಇತ್ತು. ಹಾಗಾಗಿ ವಾಹನಗಳು ಒಂದು ತಾಸಿಗೂ ಅಧಿಕ ಸಮಯ ಸಾಲುಗಟ್ಟಿ ನಿಲ್ಲಬೇಕಾಯಿತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮಣ್ಣು ತೆರವುಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net