ಹಿಮವದ್​ ಗೋಪಾಲಸ್ವಾಮಿ ದರ್ಶನಕ್ಕೆ ಮತ್ತೆ ಬಂದ ಕಾಡಾನೆ! ಫೋಟೋ ವೈರಲ್​

Himavad Gopalaswamy hill Elephant
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಿಮವದ್​ ಗೋಪಾಲಸ್ವಾಮಿ ದೇವರ ದರ್ಶನಕ್ಕೆ ಕಾಡಾನೆಯೊಂದು ಬರುತ್ತಿದೆ.

ಹಿಮವದ್​ ಗೋಪಾಲಸ್ವಾಮಿ ಬೆಟ್ಟದ ದೇಗುಲದ ಬಳಿಯೇ ಸುತ್ತಾಡುತ್ತಿದ್ದ ಕಾಡಾನೆಗೆ ದೇವಸ್ಥಾನದ ಸಿಬ್ಬಂದಿ ಪ್ರಸಾದ ನೀಡುತ್ತಿದ್ದರು. ಪ್ರಸಾದದ ಆಸೆಗೆ ಮೂರು ವರ್ಷದ ಬಳಿಕ ಮತ್ತೆ ಗೋಪಾಲಸ್ವಾಮಿ ದರ್ಶನಕ್ಕೆ ಬಂದ ಗಜರಾಜನನ ಫೋಟೋಗಳು ವೈರಲ್​ ಆಗಿವೆ. ಇದನ್ನೂ ಓದಿರಿ ಈ ಬಾರಿ ಗವಿಗಂಗಾಧರೇಶ್ವರ ಸ್ವಾಮಿಗಿಲ್ಲ ಸೂರ್ಯರಶ್ಮಿ! ಶಿವಲಿಂಗವನ್ನ ಸ್ಪರ್ಶಿಸದೆ ಪಥ ಬದಲಿಸಿದ ಭಾಸ್ಕರ

ಬೆಟ್ಟಕ್ಕೆ ಬುಧವಾರ ಭೇಟಿ ನೀಡಿದ್ದ ಪೌರಾಡಳಿತ ಇಲಾಖೆ ನಿರ್ದೇಶಕಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರು ಆ ಸಲಗನೊಂದಿಗೆ ಸೆಲ್ಫಿ ತೆಗೆಸಿಕೊಂಡಿದ್ದಾರೆ. ಅಲ್ಲದೆ, ಆನೆಗೆ ಪ್ರಸಾದ ನೀಡಿದ ಫೋಟೋಗಳು ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಐಎಎಸ್ ಅಧಿಕಾರಿ ಬಿ.ಬಿ.ಕಾವೇರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆಯೇ ದೇಗುಲ ಆವರಣಕ್ಕೆ ಕಾಡಾನೆ ಬಂದಿದೆ. ಇದೇ ವೇಳೆ ಆ ಕಾಡಾನೆಗೆ ದೇವಸ್ಥಾನದ ಪ್ರಸಾದ ಸಿಹಿಪೊಂಗಲ್, ಬೆಲ್ಲವನ್ನು ಕಾವೇರಿ ತಿನ್ನಿಸಿದರು.

ಕಾವೇರಿ ಅವರು ವನ್ಯಜೀವಿ ನಿಯಮಗಳ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಸಾದದ ಆಮಿಷಕ್ಕೆ ಒಳಗಾಗಿ ಕಾಡಾನೆ ಮತ್ತೆ ಮತ್ತೆ ಬರಬಹುದು. ಅರಣ್ಯದಂಚಿನ ಗ್ರಾಮಗಳಿಗೆ ದಾಳಿ ಮಾಡಬಹುದು. ಮಾನವ- ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಬಹುದು. ಐಎಎಸ್ ಅಧಿಕಾರಿ ವಿವೇಕಯುತವಾಗಿ ವರ್ತಿಸಬೇಕಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪರಿಸರವಾದಿಗಳಿಂದ ಟೀಕೆ ವ್ಯಕ್ತವಾಗುತ್ತಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net