ಯೂನಿಯನ್ ಬ್ಯಾಂಕ್‌ನಲ್ಲಿ ಹಿಂದಿ ದಿನಾಚರಣೆ

20
Published on


ಮೈಸೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ಇತ್ತೀಚೆಗೆ ಹಿಂದಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಹಿಂದಿ ದಿನಾಚರಣೆ ಅಂಗವಾಗಿ ನಾನಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗಣ್ಯರು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಪ್ರಾದೇಶಿಕ ಶಿಕ್ಷಣ ಸಂಸ್ಥೆ ಎನ್‌ಸಿಇಆರ್‌ಟಿಯ ಶಿಕ್ಷಣ ವಿಭಾಗದ ಪ್ರಾಧ್ಯಾಪಕ ಡಾ.ರಾಜೇಶ್ ಕುಮಾರ್, ಮೈಸೂರು ವಿವಿ ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರವೀಣ್‌ಕುಮಾರ್ ಮೆಳ್ಳಳ್ಳಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥ ಸುನೀಲ್ ವಿ. ಪಾಟೀಲ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net