

ಜೈಪುರ: ದಕ್ಷಿಣ ಭಅರತದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಧರ್ಮದ ಆಧ್ಯಾತ್ಮಿಕ ಗುರುಗಳು ಮಾಡಿರುವ ಸೇವೆಯೂ ಮಿಷನರಿಗಳನ್ನು ಮೀರಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ(RSS) ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್ ಯಾವುದೇ ಪಲಾಪೇಕ್ಷೆ ಇಲ್ಲದೆ ಸೇವೆ ಮಾಡುವುದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ. ಯಾವುದಾದರು ಒಂದು ವರ್ಗ ಸಮಾಜದಿಂದ ವಂಚಿತರಾಗಿದ್ದರೆ ಅಂತಹವರನ್ನು ದೇಶದ ಒಳಿತಿಗಾಗಿ ಮೇಲೆತ್ತ ಬೇಕು ಎಂದಿದ್ದಾರೆ.
ಸಾಮಾನ್ಯವಾಗಿ ಬುದ್ಧಿ ಜೀವಿಗಳು ಈ ತರಹದ ಕೆಲಸಗಳಿಗೆ ಮಿಷನರಿಗಳ ಬಗ್ಗೆ ಹೇಳುತ್ತಾರೆ. ಆದರೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಧರ್ಮದ ಆಧ್ಯಾತ್ಮಿಕ ಗುರುಗಳು ಮಾಡಿರುವ ಸೇವೆಯೂ ಮಿಷನರಿಗಳನ್ನು ಮೀರಿಸುತ್ತದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.