ಪ್ರಧಾನಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರ ಸಾಧ್ಯ: ಸುಬ್ರಮಣಿಯನ್ ಸ್ವಾಮಿ

modi
Published on

ನವದೆಹಲಿ: ತನ್ನ ಖಡಕ್ ವಾಗ್ದಾಳಿಗಳ ಮೂಲಕ ವಿರೋಧ ಪಕ್ಷಗಳನ್ನು ಬಾಯಿ ಮುಚ್ಚಿಸಲು ಸಾಧ್ಯವಿರುವ ಕೆಲವೇ ಕೆಲವು ಬಿಜೆಪಿ ನಾಯಕರಲ್ಲಿ ಪಕ್ಷದ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಮುಖರು.

ವಿರೋಧ ಪಕ್ಷಗಳ ಜೊತೆಗೆ ತಮ್ಮ ಪಕ್ಷದ ತಪ್ಪುಗಳನ್ನು ಕೂಡ ಕಟುವಾಗಿಯೇ ಟೀಕಿಸುವ ಸ್ವಾಮಿ, ಬಿಜೆಪಿಗರಿಗೂ ಕೂಡ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.

ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮ್ಯಾಜಿನ್​​ನಂಥದ್ದೇನೂ ಇಲ್ಲ ಎಂದು ಟೀಕಿದ್ದ ಬಿಜೆಪಿ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಟ್ವಿಟ್ಟರ್ ನಲ್ಲಿ ಪ್ರಜ್ಞಾಸಿಂಗ್ ಠಾಕೂರ್ ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್​ಎಸ್​ಎಸ್​ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net