ದಿವ್ಯಾ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಕೇಸ್! ಕಾರ್ ನಿಲ್ಲಿಸದೆಯೇ ನಟಿ ಎಸ್ಕೇಪ್.. divya suresh

Divya Suresh
Published on

ಬೆಂಗಳೂರು: ಕಿರುತೆರೆ ನಟಿ ಹಾಗೂ ಬಿಗ್​ಬಾಸ್​​ ಖ್ಯಾತಿಯ ದಿವ್ಯಾ ಸುರೇಶ್ ( divya suresh )​​ ಆಕ್ಸಿಡೆಂಟ್​ ಮಾಡಿ ಕಾರು ನಿಲ್ಲಿಸದೆ ಪರಾರಿಯಾಗಿದ್ದಾರೆ. ಈ ಕುರಿತಾಗಿ ದಿವ್ಯಾ ಸುರೇಶ್ ವಿರುದ್ಧ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಹಿಟ್ ಆಂಡ್ ರನ್ ಪ್ರಕರಣ ದಾಖಲಾಗಿದೆ.

ಬ್ಯಾಟರಾಯನಪುರದ ಎಂ.ಎಂ.ರಸ್ತೆಯಲ್ಲಿ ದಿವ್ಯಾ ಸುರೇಶ್ ಅವರು ಕಾರನ್ನು​ ವೇಗವಾಗಿ ನಿರ್ಲಕ್ಷ್ಯದ ಚಾಲನೆ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಬೈಕ್​ನಲ್ಲಿದ್ದ ಮೂವರು ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

 ಈ ಘಟನೆ ನಂತರ ದಿನಾಂಕ 7ರಂದು ಬ್ಯಾಟರಾಯನಪುರ ಠಾಣೆಗೆ ಗಾಯಾಳು ಸಂಬಂಧಿ ಕಿರಣ್ ದೂರು ನೀಡಿದ್ದರು.

ದೂರುದಾರ ಕಿರಣ್ ಅವರ ಹೇಳುವ ಪ್ರಕಾರ, ಅನುಷಾಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಬೈಕ್​ನಲ್ಲಿ  ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಟರಾನಪುರದ ಎಂ.ಎಂ ರಸ್ತೆ ಬಳಿ ನಾಯಿಗಳು ಬೊಗಳಿವೆ. ಭಯದಿಂದ ಕಿರಣ್ ಬೈಕ್​ನಲ್ಲಿ ಸ್ವಲ್ಪ ಬಲ ಬದಿಗೆ ಹೋಗಿದ್ದಾರೆ. ಈ ವೇಳೆ ವೇಗವಾಗಿ ಕಾರನ್ನು ಚಾಲನೆ ಮಾಡಿಕೊಂಡು ಬಂದ ದಿವ್ಯಾ, ಬೈಕ್​ಗೆ ಡಿಕ್ಕಿ ಹೊಡೆದು ಹಾಗೇ ಪರಾರಿಯಾಗಿದ್ದಾರೆ. ಗಾಯಾಳು ಮಹಿಳೆಗೆ  ಚಿಕಿತ್ಸೆ ನೀಡಲಾಗುತ್ತಿದೆ ಎಂದು ದೂರು ದಾಖಲಿಸಿದ್ದಾರೆ.

ಅಕ್ಟೋಬರ್​ 7 ರಂದು ಬ್ಯಾಟರಾಯನಪುರ ಠಾಣೆಯಲ್ಲಿ ಕಿರಣ್ ದೂರು ನೀಡಿದ್ದು ಸಂಚಾರಿ ಪೊಲೀಸರು ಸಿಸಿಟಿವಿ ಮೂಲಕ ಕಾರು ನಂಬರ್ ಟ್ರೇಸ್ ಮಾಡಿದ್ದಾಗ ದಿವ್ಯಾ ಸುರೇಶ್ ಮಾಡಿರುವ ಆಕ್ಸಿಡೆಂಟ್​ ಗೊತ್ತಾಗಿದೆ. ದಿವ್ಯಾ ಸುರೇಶ್ ಕಾರು ಪತ್ತೆ ಮಾಡಿ ಪೊಲೀಸರು ಸೀಜ್ ಮಾಡಿದ್ದರು. ಈಗ ಪ್ರಕರಣದ ತನಿಖೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net