ನಾಲಿಗೆ ಮೇಲೆ ಹಿಡಿತ ಇರಲಿ; ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ|Hold the tongue

priyankh
Published on

ಬೆಂಗಳೂರು: ‘ನಾವು ಬೀದಿಗೆ ಇಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತದೆ. ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಿ(Hold the tongue; warns BJP state president)’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ( Minister Priyank Kharge) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರು ಸುಪಾರಿ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಗೌರವ ಕೊಡುತ್ತೇವೆ ಅಂತ ಬಾಯಿಗೆ ಬಂದಂತೆ ಮಾತಾಡುವುದಲ್ಲ. ’ನಿಮ್ಮ ತಂದೆ ಏನು ಮಾಡಿದ್ದಾರೆ. ಪೂಜ್ಯ ತಂದೆ ಅಂದುಬಿಟ್ಟ ಮಾತ್ರಕ್ಕೆ ಪೂಜ್ಯರಾಗುವುದಿಲ್ಲ. ನಾವು ಬುದ್ದ, ಬಸವ, ಅಂಬೇಡ್ಕರ್ ಮೇಲೆ ನಂಬಿಕೆ ಇಟ್ಟವರು ಎಂದು ಟಾಂಗ್ ಕೊಟ್ಟರು.

ಪ್ರತಿಭಟನೆಗೆ ಬನ್ನಿ ಎಂದು ಮೃತ ಗುತ್ತಿಗೆದಾರ ಸಚಿನ್ ಕುಟುಂಬವನ್ನು ಬಿಜೆಪಿಯವರು ಬಲವಂತ ಮಾಡುತ್ತಿದ್ದಾರೆ. ಪದೇ ಪದೆ ಫೋನ್ ಮಾಡಿ ಸರ್ಕಾರದ ವಿರುದ್ದ ಹೇಳಿಕೆ ಕೊಡಿಸುತ್ತಿದ್ದಾರೆ. ಆಗ ಸಂತೋಷ್ ಪಾಟೀಲ್ ಕುಟುಂಬಕ್ಕೆ ಬಿಜೆಪಿಯವರು ಸಹಾಯ ಮಾಡಬೇಕಿತ್ತು. ಪ್ರಕರಣ ಸಂಬಂಧ ಸಿಐಡಿ ತನಿಖೆ ಶುರುವಾಗಿ ಎರಡು ದಿನಗಳು ಆಗಿದೆ. ಈಗಾಗಲೇ ಮಹಜರು ಮಾಡಿದ್ದಾರೆ. ಪಾರದರ್ಶಕ ತನಿಖೆ ಸರ್ಕಾರದ್ದಾಗಿದೆ. ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿಯವರು ಹೇಳಿದ ಹಾಗೆಲ್ಲ ಕೇಳಲು ಆಗಲ್ಲ’ ಎಂದರು.

ಇವರು ಹೇಳಿದಂತೆ ಮಾಡುವುದಿಲ್ಲ

ಗಂಗಾ ಕಲ್ಯಾಣ ಹಗರಣವನ್ನು ಸಿಬಿಐ ತನಿಖೆಗೆ ಕೊಟ್ಟಿದ್ರಾ?. ಪಿಎಸ್‌ಐ ಹಗರಣವನ್ನು ಕೊಟ್ಟಿದ್ರಾ?. ಇವರ ಅವಧಿಯಲ್ಲಿ ಎಷ್ಟು ಕೇಸ್‌ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ? ಮಾನವ ಸಂಪನ್ಮೂಲ ಇಲ್ಲ ಸುಮ್ಮನೆ ಕೊಡಬೇಡಿ ಅಂತಾ ಸಿಬಿಐನವರೇ ಹೇಳಿದ್ದಾರೆ. ಇವರು ಹೇಳಿದಂತೆ ಮಾಡುವುದಕ್ಕೆ ನಾವು ಇರುವುದಾ? ಎಂದು ಹರಿಹಾಯ್ದರು.

ಇದೇನಾ ನಿಮ್ಮ ಸಂಸ್ಕೃತಿ?

ಮಹಿಳೆಯರ ಮೇಲೆ ದರ್ಪ ತೋರುವುದು ಸಂಸ್ಕೃತಿಯೇ? ‘ಇವರಲ್ಲಿ ಇರುವ ಹುಳುಕು ನಾವು ತಯಾರು ಮಾಡಿದ್ದಾ?. ಕಲಬುರಗಿಯಲ್ಲಿ ಎಂಥವರಿಗೆ ಟಿಕೆಟ್ ಕೊಟ್ಟಿದ್ದಾರೆ. ವಿಪಕ್ಷ ನಾಯಕ ಅಶೋಕ್ ಮಾತಾಡಿದ್ದು ಸಂಸ್ಕೃತಿಯೇ?. ಸಿ.ಟಿ.ರವಿ ಹೆಣ್ಣುಮಕ್ಕಳ ಬಗ್ಗೆ ಅವಾಚ್ಯವಾಗಿ ನಿಂದನೆ ಮಾಡುತ್ತಾರೆ. ಮುನಿರತ್ನ ಜಾತಿ ನಿಂದನೆ ಮಾಡುತ್ತಾರೆ. ಇದೇನಾ ನಿಮ್ಮ ಸಂಸ್ಕೃತಿ? ಮಹಿಳೆಯರ ಮೇಲೆ, ಅಧಿಕಾರಿಗಳ ಮೇಲೆ ದರ್ಪ ತೋರುವುದು ನಿಮ್ಮ ಸಂಸ್ಕೃತಿಯೇ?. ನನ್ನ ಬಗ್ಗೆ ಮಾತನಾಡುವಾಗ ನಾಲಿಗೆಗೆ ಲಗಾಮು ಇರಲಿ’ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net