ಬಂದೋಬಸ್ತ್​ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು

shivamogga head constbal jan 08 2020
Published on

ಶಿವಮೊಗ್ಗ: ಕಾರ್ಮಿಕ ಸಂಘಟನೆಗಳ ಮುಷ್ಕರದ ಹಿನ್ನೆಲೆಯಲ್ಲಿ ಬಂದೋಬಸ್ತ್​ಗೆ ನಿಯೋಜನೆಗೊಂಡಿದ್ದ ಮುಖ್ಯ ಪೊಲೀಸ್​ ಪೇದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆಯ ಮುಖ್ಯ ಪೇದೆ ರವಿಶೇಟ್ (39) ಹೃದಯಾಘಾತದಿಂದ ಮೃತಪಟ್ಟವರು.
ಶಿವಮೊಗ್ಗದ ರವಿಶೇಟ್ ಮೂರು ವರ್ಷಗಳಿಂದ ಹೊಳೆಹೊನ್ನೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಬುಧವಾರ ಅವರನ್ನು ಬಂದೋಬಸ್ತ್​ ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು. ಈ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರು ಬಸ್​ನಲ್ಲಿ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net