ಗಾಂಧಿ‌ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜ.21 ಶಾಲೆಗಳಿಗೆ ರಜೆ

IMG_20250120_172834.jpg
Published on

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುತ್ಥಳಿ ಅನಾವರಣ ಸಮಾರಂಭ ಹಾಗೂ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು (ಗ್ರಾಮೀಣ ಮತ್ತು ನಗರ) ಶೈಕ್ಷಣಿಕ ವಲಯದ ಎಲ್ಲ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜ.21ರಂದು ರಜೆ ಘೋಷಿಸಲಾಗಿದೆ. ಅದೇ ರೀತಿ ಬೆಳಗಾವಿ ತಾಲೂಕಿನ ನಗರ ಯೋಜನೆ ಹಾಗೂ ಗ್ರಾಮೀಣ ಯೋಜನೆಯ ಎಲ್ಲ ಅಂಗನವಾಡಿಗಳಿಗೆ 21ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net