ಎಎನ್‌ಎಫ್ ವಿಸರ್ಜನೆ ಮಾಡುವುದಿಲ್ಲ ಗೃಹ ಸಚಿವ ಡಾ. ಪರಮೇಶ್ವರ್

parameshwar
Published on

ಮಂಗಳೂರು : ರಾಜ್ಯದಲ್ಲಿ ನಕ್ಸಲರು ಶರಣಾಗತರಾಗಿದ್ದಾರೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಪ್ರಮಾಣ ಕಡಿಮೆ ಮಾಡಲಾಗಿದೆ. ಸದ್ಯಕ್ಕೆೆ ಅಗತ್ಯತೆ ಇಲ್ಲದಿದ್ದರೂ ಯಾವುದಾದರೂ ಸಂದರ್ಭದಲ್ಲಿ ಅಗತ್ಯ ಬಂದರೆ ಬೇಕಾಗುತ್ತದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರು ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಒರಿಸ್ಸಾ, ಅಸ್ಸಾಂ ಮೊದಲಾದೆಡೆ ನಕ್ಸಲ್ ಚಟುವಟಿಕೆ ಇದೆ. ಅಲ್ಲಿಂದ ಇಲ್ಲಿಗೆ ಬರುವ ಸಾಧ್ಯತೆಯೂ ಇದೆ. ಆ ಸಂದಭರ್ದಲ್ಲಿ ಇಲ್ಲಿ ಮುಂಜಾಗ್ರತೆ ವಹಿಸಬೇಕಾಗುತ್ತದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆಯ ಸ್ವಲ್ಪಭಾಗವನ್ನು ಹಾಗೆಯೇ ಇರಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕರಾವಳಿ ಜಿಲ್ಲೆಗಳಲ್ಲಿ ಕೋಮು ಸಂಬಂಧಿ ಚಟುವಟಿಕೆಗಳಿಂದ ಶಾಂತಿ ಕಾಪಾಡುವುದು ವಿಶೇಷ ಕಾರ್ಯಪಡೆಯ ಉದ್ದೇಶ. ಜನ ಅರ್ಥ ಮಾಡಿಕೊಂಡರೆ ಈ ಪಡೆಯ ಅಗತ್ಯತೆ ಕಡಿಮೆಯಾಗುತ್ತದೆ. ಸದ್ಯ ಕಾರ್ಯಪಡೆಯನ್ನು ಸಾಂಕೇತಿಕವಾಗಿ ರಚಿಸಲಾಗಿದೆ ಎಂದವರು ಹೇಳಿದರು.

ರಹಿಮಾನ್ ಮತ್ತು ಅಶ್ರಫ್ ಹತ್ಯೆೆ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ಒಂದು ವಾರ, ತಿಂಗಳಲ್ಲಿ ಮುಗಿಯುವುದಿಲ್ಲ. ಅದರ ಬುಡಕ್ಕೆೆ ಹೋಗಬೇಕಾದರೆ ಸಮಗ್ರ ತನಿಖೆಯಾಗಬೇಕು. ಅದನ್ನು ಮಾಡುತ್ತಿದ್ದೇವೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿಯಲು ತನಿಖೆ ನಡೆಯಲಿದೆ. ಯಾವ ಉದ್ದೇಶಕ್ಕೆೆ ಕೊಲೆಯಾಗಿದೆ, ವೈಯಕ್ತಿಕವೇ, ಕೋಮುದ್ವೇಷವೇ ಎಂದು ಈಗ ಹೇಳಲಾಗದು. ತನಿಖೆಯ ವರದಿ ಬಂದ ಅನಂತರ ಗೊತ್ತಾಗಲಿದೆ ಎಂದವರು ಹೇಳಿದರು.

ಸುಹಾಸ್ ಶೆಟ್ಟಿ ಹತ್ಯೆೆ ಪ್ರಕರಣವನ್ನು ಎನ್‌ಐಎಗೆ ವಹಿಸಿರುವ ಬಗ್ಗೆೆ ಮಾತನಾಡಿದ ಸಚಿವರು, ತನಿಖೆಯನ್ನು ಎನ್‌ಐಎಗೆ ವಹಿಸುವ ಅಧಿಕಾರ ಕೇಂದ್ರಕ್ಕಿದೆ. ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅವರಿಗೆ ಕೊಡಲೇಬೇಕಾದ ಪರಿಸ್ಥಿತಿ ಬಂದಿದೆ. ಯಾಕೆ ನಿರ್ದಿಷ್ಟವಾಗಿ ಆ ಕೇಸು ಎನ್‌ಐಎಗೆ ಕೇಳಿದ್ದಾರೆಂದು ಗೊತ್ತಿಲ್ಲ ಎಂದರು.

ರಹಿಮಾನ್ ಹತ್ಯೆೆ ಪ್ರಕರಣವನ್ನು ಎನ್‌ಐಎಗೆ ಕೇಳಿಲ್ಲ. ನಮ್ಮ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ. ತನಿಖೆ ನಡೆಯುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net