ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಪಾದಯಾತ್ರೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸಚಿವ ಜಿ. ಪರಮೇಶ್ವರ್!

g
Published on

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ, ಮುಡಾ ನಿವೇಶನ ಹಗರಣ ಹಾಗೂ ಪರಿಶಿಷ್ಟರ ಉಪಯೋಜನೆ ಹಣ ದುರ್ಬಳಕೆ ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್​ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು, ಈ ಪ್ರತಿಭಟನಾ ಪಾದಯಾತ್ರೆಗೆ ಪೊಲೀಸರು ಅನುಮತಿ ನೀಡುವುದಿಲ್ಲ ಎಂದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಇಂದು ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್​ ಪ್ರತಿಭಟನಾ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಅವರನ್ನು ತಡೆಯುವುದಿಲ್ಲ ಎಂದು ತಿಳಿಸಿದರು.

ಮುಡಾದಿಂದ ನಿವೇಶನ ಹಂಚಿಕೆಯಲ್ಲಿ ಮಾಡಿರುವ ವಂಚನೆ ಖಂಡಿಸಿ ಆಗಸ್ಟ್ 10ರಂದು ಪ್ರತಿಪಕ್ಷಗಳು ಆಗಸ್ಟ್​ 3ರಿಂದ 10 ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡುವುದಿಲ್ಲ. ಅವರು ಮಾಡಿದರೆ ಬೇಡ ಎನ್ನುವುದಿಲ್ಲ. ಆದರೆ ಅಧಿಕೃತವಾಗಿ ನಮ್ಮ ಪೊಲೀಸ್ ಇಲಾಖೆ ಅನುಮತಿ ಕೊಡುವುದಿಲ್ಲ. ಪಾದಯಾತ್ರೆಗೆ ತಡೆ ಹಾಕಲ್ಲ. ಅನುಮತಿ ಕೊಟ್ಟರೆ ಕಾನೂನು ಸಮಸ್ಯೆಗಳಾಗಲಿವೆ. ನಮ್ಮ‌ ಪಾದಯಾತ್ರೆ ನಡೆಸಿದಾಗ ಬಿಜೆಪಿ ಅಧಿಕಾರದಲ್ಲಿತ್ತು. ಆಗ ಅನುಮತಿ ಕೊಟ್ಟಿರಲಿಲ್ಲ. ನಾವು ಅನುಮತಿ ಇಲ್ಲದೆ ಪಾದಯಾತ್ರೆ ಮಾಡಿದ್ದೇವೆ, ನಾವು ಅವರನ್ನು ತಡೆಯುವುದಿಲ್ಲ. ನಾವು ಅನುಕೂಲ ಮಾಡಿಕೊಡುತ್ತೇವೆ. ಅವರಿಗೆ ಯಾವುದೇ ಸಮಸ್ಯೆ ಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

ಪ್ರತಿಪಕ್ಷಗಳ ಪಾದಯಾತ್ರೆಗೆ ಪ್ರತಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣತಂತ್ರ ರೂಪಿಸುತ್ತಿದ್ದಾರೆ. ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಆದ್ದರಿಂದ ನಾವೂ ಕೂಡ ರಾಜಕೀಯ ಮಾಡಬೇಕಾಗುತ್ತದೆ. ಇದಕ್ಕೆ ಸರ್ಕಾರವನ್ನು ಬಳಸಿಕೊಲ್ಲ, ಅದನ್ನು ಪಕ್ಷದಿಂದ ಮಾಡುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net