ರೇಣುಕಸ್ವಾಮಿ ಹತ್ಯೆ ಪ್ರಕರಣ: ತಪ್ಪಿನ ಆಧಾರದ ಮೇಲೆ ತನಿಖೆ ಎಂದ ಗೃಹ ಸಚಿವ ಡಾ. ಜಿ. ಪರಮೇಶ್ವರ್​

Untitled design - 2024-06-21T150237.094
Published on

ಬೆಂಗಳೂರು: ಇಂದು ತಮ್ಮ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್​, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ನನ್ನು ವಿಚಾರಣೆ ನಡೆಸಲು ಇನ್ನೊಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ‌ ಪೊಲೀಸರು ಕೇಳಿದ್ದರು. ಆದರೆ ಎರಡು ದಿನ ಮಾತ್ರ ಕಸ್ಟಡಿಗೆ ನೀಡಲಾಗಿದೆ. ಎರಡು ದಿನದ ಬಳಿಕ ವಿಚಾರಣೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ ಎಂದು ತಿಳಿಸಿದರು‌.

ರೇಣುಕಾಸ್ವಾಮಿ ಪ್ರಕರಣದ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿಚಾರದಲ್ಲಿ ಯಾರು ನನ್ನ ಬಳಿ ಬರಬೇಡಿ ಎಂದು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ‌ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, "ನಮ್ಮ ಅಧಿಕಾರಿಗಳು ಮಾಹಿತಿ ನೀಡಲು ಹೋಗುವುದನ್ನು ಹೊರತುಪಡಿಸಿ, ಯಾರು ಹೋಗಲ್ಲ. ಅದರ ಅವಶ್ಯಕತೆಯು ಯಾರಿಗೂ ಇಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾರು ನನ್ನ ಬಳಿ ಬಂದಿಲ್ಲ‌"  ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net