ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ: ಗೃಹಸಚಿವ ಪರಮೇಶ್ವರ್

Parameshwar
Published on

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಅಪರಾಧ ಕೃತ್ಯಗಳು ಹಾಗೂ ಕೊಲೆಗಳು ಹೆಚ್ಚುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣಗಳಿಂದ ರಾಜ್ಯ ಬೆಚ್ಚಿಬಿದ್ದಿದ್ದು, ಅಹಿತಕರ ಘಟನೆಗಳನ್ನು ಖಂಡಿಸಿ, ಜನ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹಸಚಿವ ಡಾ.ಜಿ. ಪರಮೇಶ್ವರ್ ಪ್ರಕರಣದಲ್ಲಿ ಪೊಲೀಸರ ಲೋಪವೂ ಇದೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಪರಮೇಶ್ವರ್, ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಲೋಪ ಇರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಕರ್ತವ್ಯ ಲೋಪದಡಿ ಪೊಲೀಸ್​ ಇನ್ಸ್​ಪೆಕ್ಟರ್​ ಮತ್ತು ಮಹಿಳಾ ಹೆಡ್​​ಕಾನ್​ಸ್ಟೇಬಲ್​ ಅವರನ್ನು ಅಮಾನತುಗೊಳಿಸಲಾಗಿದೆ.

ನನ್ನ ಮೊಮ್ಮಗಳಿಗೆ ಜೀವ ಬೆದರಿಕೆ ಇದೆ ಅಂತ ಅಂಜಲಿ ಅವರ ಅಜ್ಜಿ ಪೋಷಕರು, ಪೊಲೀಸರಿಗೆ ಮೊದಲೆ ಮಾಹಿತಿ ನೀಡಿದ್ದೆವು ಎಂದು ಹೇಳಿದ್ದಾರೆ. ಕೊಲೆ ಆರೋಪಿ ವಿಶ್ವನನ್ನು ಪೊಲೀಸರು ಬಂಧಿಸಿದ್ದಾರೆ, ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net