ವಾಹನ ಡಿಕ್ಕಿ ಹೋಂಗಾರ್ಡ್ ಸಾವು

accident-15
Published on

ಬೆಂಗಳೂರು: ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ವಿಜಯ್ಕುಮಾರ್ ಎಂಬ ಗೃಹರಕ್ಷಕ ದಳ ಸಿಬ್ಬಂದಿ ಮೃತಪಟ್ಟಿರುವ ಪ್ರಕರಣ ನೈಸ್ ರಸ್ತೆ ಜಂಕ್ಷನ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ.
ಕೆಂಗೇರಿ ಸಂಚಾರ ಠಾಣೆಗೆ ನಿಯೋಜನೆಗೊಂಡಿದ್ದ ವಿಜಯ್ಕುಮಾರ್(೪೨), ನೈಸ್ ರಸ್ತೆ ಜಂಕ್ಷನ್‌ನಲ್ಲಿ ೮ ಗಂಟೆಯ ವೇಳೆ ಸಂಚಾರ ನಿರ್ವಹಣೆ ಮಾಡುತ್ತಿದ್ದರು. ಈ ವೇಳೆ ನಿರ್ಲಕ್ಷ್ಯದಿಂದ ಅತಿ ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಬಂದ ಕ್ಯಾಂಟರ್ ಚಾಲಕ, ವಿಜಯ್ಕುಮಾರ್ ಅವರಿಗೆ ವಾಹನ ಗುದ್ದಿಸಿದ್ದಾನೆ. ಈ ವೇಳೆ ಆತನ ಎದೆಯ ಮೇಲೆ ಚಕ್ರ ಹರಿದಿದ್ದು ಘಟನೆಯ ನಂತರ ಚಾಲಕ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವಿಜಯ್‌ಕುಮಾರ್‌ನನ್ನು ಆಸ್ಪತ್ರೆ ಕರೆದೊಯ್ಯಲಾಯಿತು ಆದರೆ ಚಿಕಿತ್ಸೆ ಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಂತರ ಸರಕು ಸಾಗಣೆ ವಾಹನದ ಚಾಲಕ ವಾಹನ ನಿಲ್ಲಿಸಿಲ್ಲ. ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ವಾಹನ ಪತ್ತೆಗೆ ಕ್ರಮ ಕೈಗೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಗೇರಿ ಸಂಚಾರ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net