ಮರ್ಯಾದೆಗೇಡು ಹತ್ಯೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ

Siddaramaiah
Published on

ಬೆಂಗಳೂರು: ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣಗಳ ಸುದ್ದಿ ಮನ ಕಲಕಿದೆ. ಈ ಪ್ರಕರಣಗಳಲ್ಲಿ ಸರ್ಕಾರವು ಕಾನೂನುನಾತ್ಮಕವಾಗಿ ನಿರ್ದಾಕ್ಷಿಣ್ಯ ಕ್ರಮವಹಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆವಹಿಸಲಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಲಿಸುತ್ತವೆ ಎಂದು ವ್ಯಾಕುಲತೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸರಣಿ ಸಂದೇಶ ಹಂಚಿಕೊಂಡಿರುವ ಸಿದ್ದರಾಮಯ್ಯ, ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ. ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸಬೇಕಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net