ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

24 SARAG 2
Published on

ಸರಗೂರು : ಸರಗೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕರಿಸಿ ಎಂದು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ
ಸರಗೂರು ಕೃಷ್ಣ ಹೇಳಿದರು.
ಗ್ರೇಡ್ 1 ತಹಸೀಲ್ದಾರ್ ಆಗಿ ಅಧಿಕಾರ ಸ್ವೀಕರಿಸಿದ ರುಕೀಯಾ ಬೇಗಂ ಅವರನ್ನು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಬುಧವಾರ ಸನ್ಮಾನಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಗೂರು ತಾಲೂಕು ಎಂದು ಘೋಷಣೆ ಮಾಡಿದ್ದಾರೆ. ಅದರೆ ಈವರೆಗೆ
ಹೇಳಿಕೊಳ್ಳುವ ಮಟ್ಟದ ಅಭಿವೃದ್ಧಿ ಆಗಿಲ್ಲ. ಈ ಕಾರ್ಯಕ್ಕೆ ಎಲ್ಲ ಇಲಾಖೆ ಅಧಿಕಾರಿಗಳೂ ಬೆಂಬಲ ನೀಡಬೇಕು ಎಂದು ಅವರು ಮನವಿ ಮಾಡಿದರು. ನೂತನ ತಾಲೂಕು ಘೋಷಣೆಯಾಗಿ ಹಲವು ವರ್ಷಗಳು ಕಳೆದಿವೆ. ಆದರೆ ಬಹುತೇಕ ಇಲಾಖೆ ಕಚೇರಿ, ಅಧಿಕಾರಿಗಳು ಇಲ್ಲಿಗೆ ಬಂದಿಲ್ಲ. ಈ ಭಾಗದಲ್ಲಿ ಅತಿಹೆಚ್ಚು ರೈತರು ಹಾಗೂ ಹಾಡಿ ಜನರು ಇದ್ದಾರೆ. ಅದ್ದರಿಂದ ಸಾರ್ವಜನಿಕರನ್ನು ಕಂದಾಯ.ಇತರೆ ಇಲಾಖೆಗಳಿಗೆ ಅಲೆಯುವುದೇ ಹೆಚ್ಚಾಗಿದೆ. ಈ ಸಮಸ್ಯೆ ತಪ್ಪಿಸಲು ನೆರವಾಗಿ ಎಂದು ಅವರು ನೂತನ ತಹಸೀಲ್ದಾರ್ ರುಕೀಯಾ ಬೇಗಂ ಅವರಿಗೆ ಮನವಿ ಮಾಡಿದರು.
ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ ಸರಗೂರು ಕ್ಷೇತ್ರದ ಅಭಿವೃದ್ಧಿ ಗೆ ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡಿಸಿದ್ದಾರೆ. ನಮ್ಮದು ಮಾದರಿ ತಾಲೂಕು ಆಗಬೇಕು. ಸೌಲಭ್ಯಗಳನ್ನು ಒದಗಿಸುವ ಕೆಲಸಕ್ಕೆ ಎಲ್ಲ ಅಧಿಕಾರಿ ಮತ್ತು ಜನ ಪ್ರತಿನಿಧಿಗಳಿಗೆ ನಾವು ಮನವಿ ಮಾಡುತ್ತೇವೆ. ಇದಕ್ಕೆ ಸಹಕಾರ ಕೊಡಿ ಎಂದು ಅವರು ಮನವಿ ಮಾಡಿದರು.
ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಸನ್ಮಾನ ಸ್ವೀಕರಿಸಿದ ತಹಸೀಲ್ದಾರ್ ರುಕೀಯಾ ಬೇಗಂ ಮಾತನಾಡಿ, ತಾಲೂಕಿನ ಪ್ರತಿಯೊಬ್ಬರ ಸಮಸ್ಯೆಗಳಿಗೂ ಸ್ಪಂದಿಸುತ್ತೇನೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡಿದ ನನಗೆ ಸಾಮಾನ್ಯ ಜನರ ಸಮಸ್ಯೆ ತಿಳಿದಿವೆ. ಜನತೆ ಮತ್ತು ಸಂಘ ಸಂಸ್ಥೆ ಪ್ರಮುಖರು ನಮ್ಮ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡಬೇಕು. ಆಗ ಮಾತ್ರ ಮಾದರಿ ತಾಲೂಕು ಎಂಬ ಕನಸು ನನಸಾಗಲು ಸಾಧ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net