

ಹಾಸನ: ಸಾರಿಗೆ ಬಸ್, ಟೆಂಪೊ ಟ್ರಾವೆಲರ್ ಹಾಗೂ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಕ್ಕಳು ಸೇರಿ 8 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣವಾರ ಹೋಬಳಿಯ ಹಳ್ಳಿಕೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸಾರಿಗೆ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ಉಂಟಾಗಿದೆ.
ಟೆಂಪೊ ಟ್ರಾವೆಲರ್ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿಗೀಡಾದವರು ಹಾಗೂ ಗಾಯಾಳುಗಳ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.