

UttaraPradesh: ಎಸ್‌ಯುವಿ ಕಾರು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ-ವಾರಣಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಮೇ.31) ನಡೆದಿದೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಬೈಕ್ನಲ್ಲಿ ಕುಳಿತಿದ್ದ ನಾಲ್ವರು ಸ್ನೇಹಿತರು ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುತ್ತಿರುವುದನ್ನು ಮತ್ತು ಗೋರಖ್‌ಪುರ ಕಡೆಯಿಂದ ಬರುತ್ತಿದ್ದ ಎಸ್‌ಯುವಿ ಅವರಿಗೆ ಡಿಕ್ಕಿ ಹೊಡೆದಿದೆ.
ಕಾರಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ಮೃತ ನಾಲ್ವರಲ್ಲಿ ರಾಹುಲ್ ಜೂನ್ 1 ರಂದು ನಿಶ್ಚಿತಾರ್ಥ ಮಾಡಿಕೊಳ್ಳಲು ನಿಗದಿಯಾಗಿದ್ದು, ಆತನ ಸ್ನೇಹಿತ ಅರವಿಂದ್ ಕೇವಲ ಒಂದು ವಾರದ ಹಿಂದೆ ಬ್ಯಾಂಕಾಕ್‌ನಿಂದ ಹಿಂತಿರುಗಿದ್ದರು. ಉಳಿದವರಲ್ಲಿ ಇಬ್ಬರು ಹೆಣ್ಣುಮಕ್ಕಳ ತಂದೆ ಸುನಿಲ್ ಮತ್ತು ಪ್ರದೀಪ್ ಸೇರಿದ್ದಾರೆ.
ಭಾನುವಾರ ಬೆಳಿಗ್ಗೆ 9:50 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಥಳೀಯರು ನಾಲ್ವರು ವ್ಯಕ್ತಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಮಧ್ಯದಲ್ಲಿಯೇ ಮೃತಪಟ್ಟರು. (ಏಜೆನ್ಸೀಸ್)