

ಹೊಸಪೇಟೆ : ನಾಡಹಬ್ಬದ ದಸರಾ ಹಬ್ಬದ ಸಾಲು, ಸಾಲು ರಜೆ ಜತೆಗೆ ಶಾಲಾ ಮಕ್ಕಳಿಗೆ ರಜೆ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿಶ್ವವಿಖ್ಯಾತ ಹಂಪಿಗೆ ಹರಿದು ಬಂದ ಪ್ರವಾಸಿಗರು ಸ್ಮಾರಕಗಳನ್ನು ಕಣ್ತುಂಬಿಕೊAಡರು. ಅದರಲ್ಲೂ ಶನಿವಾರ ಹಾಗೂ ಭಾನುವಾರ ಹೆಚ್ಚಿನ ಪ್ರವಾಸಿಗರು ಹರಿದು ಬಂದಿದ್ದಾರೆ.
ಹAಪಿಯ ಶ್ರೀವಿರೂಪಾಕ್ಷೇಶ್ವರ ದೇಗುಲ ವೀಕ್ಷಣೆಗೆ ದಿನಕ್ಕೆ ಅಂದಾಜು 30 ರಿಂದ 40 ಸಾವಿರ ಕ್ಕೂ ಅಧಿಕ ಭಕ್ತರು ಹಾಗೂ ಪ್ರವಾಸಿಗರು ಭೇಟಿ ನೀಡಿದ್ದಾರೆ. ಶುಕ್ರವಾರ, ಶನಿವಾರ ಹಾಗೂ ಭಾನುವಾರ ಅಂದಾಜು ಒಂದು ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ. ದಸರಾ ನಿಮಿತ್ತ ದೇಗುಲಕ್ಕೆ ಭೇಟಿ ನೀಡಿದ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಸ್ವಾಮಿಯ ದರ್ಶನ ಪಡೆದಿದ್ದಾರೆ. ಜತೆಗೆ ವಿಜಯವಿಠಲ ದೇಗುಲಕ್ಕೆ ಬ್ಯಾಟರಿ ಚಾಲಿತ ವಾಹನಗಳು ಕೊರತೆಯಿಂದ ನಡೆದುಕೊಂಡೆ ಪ್ರವಾಸಿಗರು ಕಲ್ಲಿನ ರಥ, ಸಂಗಿತ ಮಂಟಪ ವೀಕ್ಷಣೆ ಮಾಡಿದರು. ಹಂಪಿಯ ಎದುರು ಬಸವಣ್ಣ ಮಂಟಪ, ಸಾಸಿವೆ ಕಾಳು ಗಣಪ ಮಂಟಪ, ಕಡಲೆ ಕಾಳು ಗಣೇಶ ಮಂಟಪ, ಕಮಲ ಮಹಲ್, ಮಹಾನವಮಿ ದಿಬ್ಬ ಸೇರಿದಂತೆ ವಿವಿಧ ದೇಗುಲ ಹಾಗೂ ಸ್ಮಾರಕಗಳನ್ನು ವೀಕ್ಷಿಸಿದರು. ಹಂಪಿಯ ಸ್ಮಾರಕಗಳ ಸೊಬಗನ್ನು ವೀಕ್ಷಿಸಿದ ಪ್ರವಾಸಿಗರು ಸ್ಮಾರಕಗಳ ಬಗ್ಗೆ ಹಾಗೂ ವಿಜಯನಗರ ಚರಿತ್ರೆಯನ್ನು ಮಾರ್ಗದರ್ಶಕರಿಂದ ಮಾಹಿತಿ ಪಡೆದರು.
ಪ್ರತಿ ದಿನ ಸಾವಿರಾರು ಪ್ರವಾಸಿಗರು ಹಂಪಿಗೆ ಭೇಟಿ ನೀಡುತ್ತಾರೆ. ಅಲ್ಲಿನ ಸೊಬಗನ್ನು ಕಣ್ತುಂಬಿಕೊಳ್ಳುತ್ತಾರೆ. ಸದ್ಯ ಮಳೆಯಲ್ಲಿ ಹಂಪಿಯ ಸ್ಮಾರಕಗಳ ಸೊಬಗು ಇನ್ನಷ್ಟು ಕಂಗೊಳಿಸುತ್ತಿದೆ. ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಹಂಪಿಯಲ್ಲಿ ಸ್ಮಾರಕಗಳು ಮಳೆಯಲ್ಲಿ ಕಂಗೊಳಿಸುತ್ತಿವೆ. ಜತೆಗೆ ಈ ಮಳೆ ಪ್ರವಾಸಿಗರಿಗೂ ಮುದ ನೀಡುತ್ತಿದೆ. ಕಲ್ಲಿನ ತೇರು ಸೇರಿದಂತೆ ಸಾಲು ಮಂಟಪಗಳು ನೋಡಲು ಅತ್ಯಾಕರ್ಷಕವಾಗಿ ಕಾಣಿಸುತ್ತಿವೆ.
===ಹೆಚ್ಚಿದ ವ್ಯಾಪರ ವಹಿವಾಟು==
ಕೆಲ ದಿನಗಳ ವರೆಗೆ ಹಂಪಿಗೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿತ್ತು. ಇದರಿಂದ ಪ್ರವಾಸಿ ಮಾರ್ಗದರ್ಶಿಗಳು ಸೇರಿದಂತೆ ಹಂಪಿಯಲ್ಲಿನ ಸಣ್ಣಪುಟ್ಟ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ಕಂಗಾಲಾಗಿದ್ದರು. ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಸ್ಮಾರಕಗಳನ್ನು ನೋಡಲು ಉತ್ತಮ ವಾತಾವರಣ ನಿರ್ಮಾಣವಾಗಿದೆ. ಪ್ರವಾಸಿಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇದರಿಂದ ವ್ಯಾಪಾರ ವಹಿವಾಟು ಹೆಚ್ಚಾಗಿದೆ.