ಶಿಕ್ಷಣ, ಉದ್ಯೋಗ, ಆರೋಗ್ಯಕ್ಕಾಗಿ ಹೋರಾಟ ನಡೆಯಲಿ

news
ಹೊಸಪೇಟೆಯ ಉಮರ್ಫಂಕ್ಷನ್ ಹಾಲ್ನಲ್ಲಿ ಶನಿವಾರ ಶಿಕ್ಷಣ, ಉದ್ಯೋಗ, ಆರೋಗ್ಯಕ್ಕಾಗಿ ರಾಜ್ಯ ಸಂಘಟನಾ ಕಾರ್ಯಾಗಾರವನ್ನು ರಾಜ್ಯಸಭಾ ಸದಸ್ಯ ಎ.ಎ.ರಹೀಂ ಉದ್ಘಾಟಿಸಿದರು.
Published on

ಹೊಸಪೇಟೆ: ಕೇಂದ್ರ ಸರ್ಕಾರದ 9.79 ಲಕ್ಷ ಹುದ್ದೆಗಳು, ರೈಲ್ವೆ ಇಲಾಖೆಯ 2.74 ಲಕ್ಷ ಹುದ್ದೆಗಳ ಸಹಿತ ಲಕ್ಷಾಂತರ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಎ.ಎ.ರಹೀಂ ಹೇಳಿದರು.

ಶಿಕ್ಷಣ, ಉದ್ಯೋಗ, ಆರೋಗ್ಯಕ್ಕಾಗಿ ಡಿವೈಎಫ್‌ಐ ಸಂಘಟನೆಯಿAದ ಶನಿವಾರ ಉಮರ್‌ಫಂಕ್ಷನ್ ಹಾಲ್‌ನಲ್ಲಿ ಶನಿವಾರ ರಾಜ್ಯ ಸಂಘಟನಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಗುತ್ತಿಗೆ ವ್ಯವಸ್ಥೆಯನ್ನು ಉತ್ತೇಜಿಸುತ್ತಿದೆ. ಸೇನೆಯಲ್ಲೂ ಅಗ್ನಿವೀರ ಹೆಸರಲ್ಲಿ ಗುತ್ತಿಗೆ ಪದ್ಧತಿ ತರಲಾಗಿದೆ. ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದಿಂದ ಜೀವನ ವೆಚ್ಚದ ಪ್ರಮಾಣ ಹೆಚ್ಚಳವಾಗಿದೆ. ಯುವಜನತೆ ಉದ್ಯೋಗ ಇಲ್ಲದೆ ಪರಿತಪಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಯುವಜನತೆ ನಿರುದ್ಯೋಗ ನೀಡುವಲ್ಲಿ ವಿಫಲವಾಗಿದೆ. ಕಾಯಂ ಉದ್ಯೋಗವನ್ನೇ ನೀಡಬೇಕು ಎಂದು ನಮ್ಮ ಸಂಘಟನೆ ಹೋರಾಟ ನಡೆಸಲಿದೆ ಎಂದರು. ರಾಜ್ಯ ಘಟಕದ ಮಾಜಿ ಅಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ, ಬೆಂಗಳೂರಿನಲ್ಲಿ ಮಾತ್ರವಲ್ಲ, ಜಿಲ್ಲಾ ಮಟ್ಟದಲ್ಲೂ ಉದ್ಯೋಗ ಅವಕಾಶ ಹೆಚ್ಚಿಸಬೇಕು, ಇಲ್ಲೂ ಸ್ಥಳೀಯರಿಗೆ ಹೆಚ್ಚಿನ ಅವಕಾಶ ನೀಡಬೇಕು. ಕೆಲವೇ ಕೆಲವು ಕಾರ್ಪೊರೇಟ್ ಕಂಪನಿಗಳ ಒತ್ತಡಕ್ಕೆ ಮಣಿದು ನೇಮಕಾತಿಯಲ್ಲಿ ಕನ್ನಡಿಗರಿಗೆ ಮೀಸಲಾತಿ ಅಧಿಸೂಚನೆ ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದರು.

ಅಧ್ಯಕ್ಷೆ ಲವಿತ್ರ ವಸ್ತ್ರದ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ, ಸಿದ್ಧತಾ ಸಮಿತಿಯ ಅಧ್ಯಕ್ಷ ಎ.ಕರುಣಾನಿಧಿ, ಪ್ರಮುಖರಾದ ನಾಗರತ್ನಮ್ಮ, ಜಂಬಯ್ಯ ನಾಯಕ, ಜೆ.ಪ್ರಕಾಶ, ಈಡಿಗರ ಮಂಜುನಾಥ, ವಿ.ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net