ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸೋಣ

17 MANJU 01 (1)
Published on

ಹೊಸಪೇಟೆ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರೂ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 405 ಅಡಿ ಎತ್ತರದ ಧ್ವಜ ಸ್ತಂಭದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಗೆ ಒಳಪಡುವ 07 ಜಿಲ್ಲೆಗಳಲ್ಲಿ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ ಶೇ.80 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಪ್ರದೇಶಾಭಿವೃದ್ದಿ ಮಂಡಳಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗಿದೆ. ಈ ಭಾಗದಲ್ಲಿ ಮೂಲಭೂತ ಸೌಕರ್ಯ, ಆರೋಗ್ಯ, ಸಾಮಾಜಿಕ, ರಸ್ತೆ ಸಂಪರ್ಕ, ಶುದ್ದ ಕುಡಿವ ನೀರಿನ ವ್ಯವಸ್ಥೆ, ಇನ್ನೀತರೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಕ್ಕೆ ಅನುದಾನವನ್ನು ಮೀಸಲಿರಿಸಲಾಗಿದೆ. ಈ ಸಾಲಿನ ಮ್ಯಾಕ್ರೋ ಯೋಜನೆಯಡಿಯಲ್ಲಿ ನಗರದಲ್ಲಿ 250 ಹಾಸಿಗೆ ಆಸ್ಪತ್ರೆಯನ್ನು 400 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆರಿಸುವ ರೂ.15 ಕೋಟಿಗಳ ಬೃಹತ್ ಕಾಮಗಾರಿಗೆ ಮಂಡಳಿಯಿAದ ಮಂಜೂರಾತಿ ದೊರಕಿದೆ. ಜಿಲ್ಲೆಯ ಅಭಿವೃದ್ದಿಗಾಗಿ ನಾವೇಲ್ಲರೂ ಒಟ್ಟಾಗಿ ದುಡಿಯಬೇಕು ಎಂದುರು.

ಪರೇಡ್ ಕಮಾಂಡರ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್, ಗೃಹರಕ್ಷದಳ, ಎನ್‌ಸಿಸಿ, ಗೈಡ್ಸ್, ಸೇವಾದಳ, ವಿವಿಧ ಶಾಲೆಗಳು ಒಳಗೊಂಡAತೆ ಒಟ್ಟು 08 ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಮಕ್ರಮಗಳು ನಡೆದವು.
ಹಿಟ್ನಾಳನ ಸರ್ಕಾರಿ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಟಿ.ಎಚ್.ಬಸವರಾಜ ವಿಶೇಷ ಉಪನ್ಯಾಸ ನೀಡಿದರು. ಹುಡಾ ಅಧ್ಯಕ್ಷ ಎಚ್.ಎನ್.ಎಫ್ ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಜಿ.ಪಂ. ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಕ್ರಮ ಅಲಿ ಶಾ, ಎಸ್ಪಿ ಬಿ.ಎಲ್.ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net