ಹೊಸಪೇಟೆ: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೂವಿನಹಡಗಲಿಯ ಪಂಚಮಸಾಲಿ ಸಮುದಾಯ ಭವನದಲ್ಲಿ ಸೆ.24ರಂದು ಬೆಳಿಗ್ಗೆ 11 ಗಂಟೆಗೆ ಪಿ.ಎಂ. ಸೂರ್ಯ ಘರ್ ಯೋಜನೆ, ವಿಕಸಿತ ಭಾರತ ಬಜೆಟ್, ಹೊಸ ಕ್ರಿಮಿನಲ್ ಕಾನೂನುಗಳು ಹಾಗೂ ಪಿ.ಎಂ ದೂರದರ್ಶಿತ್ವ-2047ರ ಪೋಷಣ ಅಭಿಯಾನ ಮತ್ತು ಛಾಯಾಚಿತ್ರ ಪ್ರದರ್ಶನ ಹಾಗೂ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್‌ಖಾನ್ ಛಾಯಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಸದಸ್ಯ ಈ.ತುಕಾರಾಂ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ.