ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Published on

ಹೊಸಪೇಟೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಂದ ಈ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವಾಗಿದ್ದು, ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಸೇರಿದಂತೆ ಇತರೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೊಸ ಅರ್ಜಿಗಳನ್ನು ನ.05ರೊಳಗಾಗಿ ತಾಲೂಕ ಕಲ್ಯಾಣಾಧಿಕಾರಿಗಳು ಪರಿಶೀಲನೆ ಮಾಡುವರು. ತಾಲೂಕ ಸಮಿತಿಯ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆಪಟ್ಟಿ ನ.8ಕ್ಕೆ ಪ್ರಕಟಣೆ, ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ನ.11 ಅಂತಿಮ ದಿನವಾಗಿದೆ. ವಿದ್ಯಾರ್ಥಿಗಳು ವೆಬ್‌ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bಛಿತಿಜheಟಠಿಟiಟಿe@gmಚಿiಟ.ಛಿom ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು ಎಂದು ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net