ಬಿಸಿಲಿನ ತಾಪ; ಅಂನಗವಾಡಿ ಕಾರ್ಯನಿರ್ವಹಣಾ ಸಮಯ ಬದಲಾವಣೆ|Hot weather

Vidhanasoudha
Published on

ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗಿರುವ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆ(Hot weather; Anagavadi operating hours changed) ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ.

ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್‌ನ ಇತರ ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೂಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net