ಮನೆ ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆ

Crime Logo
Published on

ಸವಣೂರ: ಮನೆಕಟ್ಟುವ ಸಲುವಾಗಿ ಮಾಡಿದ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲಿವಾಳ ಗ್ರಾಮದಲ್ಲಿ ಬುಧವಾರ ನಡೆದಿದೆ.
ಲಕ್ಷ$್ಮಪ್ಪ ವಸಂತಪ್ಪ ತಿಮ್ಮಾಪುರ (38) ಮೃತ ವ್ಯಕ್ತಿ.
ಇವರು ಮನೆ ಕಟ್ಟುವ ಸಲುವಾಗಿ ಬ್ಯಾಂಕ್​ ಹಾಗೂ ಖಾಸಗಿ ಫೈನಾನ್ಸ್​ಗಳಲ್ಲಿ ಸಾಲ ಮಾಡಿಕೊಂಡಿದ್ದರು. ಇದನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net