

ಬಂಕಾಪುರ: ಮನೆ ಕಟ್ಟುವ ಸಲುವಾಗಿ ಮಾಡಿದ ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಗುಡ್ಡದ ಚನ್ನಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮಾಲತೇಶ ಕೋಟ್ರಪ್ಪ ಗುಡ್ಡಿಯವರ (24) ಮೃತ ವ್ಯಕ್ತಿ.
ಇವರು ಮನೆ ಕಟ್ಟುವ ಸಲುವಾಗಿ 1.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ತನಗೆ ಆಗಾಗ ಬರುತ್ತಿದ್ದ ಹೊಟ್ಟೆನೋವಿನಿಂದ ಕೆಲಸಕ್ಕೆ ಹೋಗಲಾಗದೆ ಸಾಲ ತೀರಿಸುವುದು ಹೇಗೆ ಎಂದು ಚಿಂತಿಸಿ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.