

ಹೊಸಪೇಟೆ: ಜಿಲ್ಲೆಯ ಒಂದು ತಾಲ್ಲೂಕು ಸೇರಿದಂತೆ ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರಿನ ಒಟ್ಟು ೧೦ ತಾಲೂಕಿನ ಗಣಿಬಾಧಿತ ಪ್ರದೇಶದ ಜನರಿಗೆ ವಸತಿ ಇಲಾಖೆಯಡಿ ಮನೆಗಳನ್ನು ಒದಗಿಸಲಾಗುವುದು ಎಂದು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ ನೀಡಿದರು.
ತಾಲೂಕಿನ ಕಾರಿಗನೂರು ಗ್ರಾಮದ ಹೊರವಲಯದಲ್ಲಿರುವ ಜಿಜಿ ಕ್ಯಾಂಪ್, ಪಿಬಿಎಸ್ ಕ್ಯಾಂಪಿನ ಪ್ರದೇಶಕ್ಕೆ ಸೋಮವಾರ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಜೊತೆ ಮೂಲಸೌಕರ್ಯಗಳ ಮಾಹಿತಿ ಪಡೆದುಕೊಂಡರು.
ಬಳಿಕ ಮಾತನಾಡಿದ ಅವರು, ಈ ಭಾಗದ ಗಣಿಬಾಧಿತ ಪ್ರದೇಶಗಳ ವಸತಿ ಸೌಲಭ್ಯಕ್ಕೆ ಪ್ರಸ್ತಾವನೆ ಕಳಿಸಿಲ್ಲ. ವಸತಿ ಯೋಜನೆಯಡಿ ೧೧೯೩ ಕೋಟಿ ರೂ. ಅನುದಾನದಡಿ ಕೈಗೊಳ್ಳುತ್ತಿರುವ ಸೌಲಭ್ಯಕ್ಕೆ ಪ್ರಸ್ತಾವನೆ ಕಳಿಸಲಾಗಿದೆ. ಗಣಿಬಾಧಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಸ್ಲಂ ಬೋರ್ಡ್ ವತಿಯಿಂದ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕರಾದ ಹೆಚ್.ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್, ಎಂ.ಪಿ.ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ., ಜಿ.ಪಂ. ಸಿಇಒ ಬಿ.ಸದಾಶಿವ ಪ್ರಭು, ಎಸ್ಪಿ ಬಿ.ಎಲ್.ಶ್ರೀಹರಿ ಬಾಬು, ಡಿಎಫ್ಓ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಉಪವಿಭಾಗಾಧಿಕಾರಿ ನೋಂಗ್ಡಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಇದ್ದರು.