ಎಚ್‌ಡಿಎಫ್‌ಸಿ ಬ್ಯಾಂಕ್​​​ನಲ್ಲಿ ಎಚ್‌ಡಿಎಫ್‌ಸಿ ಲಿಮಿಟೆಡ್ ವಿಲೀನ

hdfc bank
Published on


ನವದೆಹಲಿ: ದೇಶದ ಮೊದಲ ಗೃಹ ಹಣಕಾಸು ಸಂಸ್ಥೆಯಾದ ಹೌಸಿಂಗ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಡಿಎಫ್‌ಸಿ ಲಿಮಿಟೆಡ್) ತನ್ನ ಅಂಗಸಂಸ್ಥೆ ಹಾಗೂ ಭಾರತದ ಅತಿ ದೊಡ್ಡ ಖಾಸಗಿ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್‌ನೊಂದಿಗೆ ಶನಿವಾರ (ಜುಲೈ 1) ವಿಲೀನಗೊಳ್ಳಲಿದೆ. ಈ ಮೂಲಕ ಎಚ್‌ಡಿಎಫ್‌ಸಿ ಬ್ಯಾಂಕ್ ಜಗತ್ತಿನ ಅತಿ ದೊಡ್ಡ ಹಣಕಾಸು ಸಂಸ್ಥೆಯಾಗಿ ಹೊರಹೊಮ್ಮಲಿದೆ.

ಏಪ್ರಿಲ್ 2022ರಲ್ಲಿಯೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ವಿಲೀನದೊಂದಿಗೆ ಎಚ್​​​ಡಿಎಫ್​​​ಸಿ ಮಾರುಕಟ್ಟೆ ಬಂಡವಾಳ ಮೌಲ್ಯ 18 ಲಕ್ಷ ಕೋಟಿ ರೂ.ಗೂ ಹೆಚ್ಚಾಗಲಿದೆ. ವಿಲೀನದಿಂದ ಷೇರುದಾರರು ಮತ್ತು ಗ್ರಾಹಕರಿಬ್ಬರಿಗೂ ಪ್ರಯೋಜನವಿದೆ ಎನ್ನಲಾಗಿದೆ.

1977ರಂದು ಸ್ಥಾಪನೆಯಾಗಿದ್ದ ಎಚ್‌ಡಿಎಫ್‌ಸಿ ಲಿಮಿಟೆಡ್ ಜುಲೈ 1 ರಿಂದ ಅಸ್ತಿತ್ವದಲ್ಲಿರುವುದಿಲ್ಲ. ಹಾಗೆಯೇ ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿರ್ದೇಶಕರ ಮಂಡಳಿಯು ಎಚ್‌ಡಿಎಫ್‌ಸಿ ಲಿಮಿಟೆಡ್‌ನ ನಿರ್ದೇಶಕರ ಮಂಡಳಿಯೊಂದಿಗೆ ಸಮಾಲೋಚಿಸಿ, ಜು.13 ರಂದು ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಷೇರುದಾರರನ್ನು ನಿರ್ಧರಿಸಲಿದೆ. ಹಾಗೆಯೇ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಷೇರುಗಳನ್ನು ವಿತರಿಸಲಾಗುವುದು. ಅಲ್ಲದೆ ಅದೇ ದಿನದಂದು ಎಚ್‌ಡಿಎಫ್‌ಸಿ ಬ್ಯಾಂಕ್ ಹೆಸರಿನಲ್ಲಿ ಎಚ್‌ಡಿಎಫ್‌ಸಿ ಲಿಮಿಟೆಡ್‌ನ ಅಧಿಕಾರ ಮುಂದುವರಿಸಲಾಗುವುದು. ಎಚ್‌ಡಿಎಫ್‌ಸಿ ಲಿಮಿಟೆಡ್ ಭಾರತೀಯ ಷೇರುಪೇಟೆಗಳಿಗೆ ಈ ಕುರಿತು ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net