ಜ.22 ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಕಳೆದ 6 ದಿನಗಳಲ್ಲಿ ಭೇಟಿ ಕೊಟ್ಟ ಭಕ್ತರ ಸಂಖ್ಯೆ ಎಷ್ಟು ಲಕ್ಷ ಗೊತ್ತೇ?

ವಿಜಯವಾಣಿ - 2024-01-29T070057.558
Published on

ಅಯೋಧ್ಯೆ: ಜನವರಿ 22ರಂದು ನಡೆದ ಅಯೋಧ್ಯೆ ರಾಮಮಂದಿರದ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ದೂರಿಯಾಗಿ ನೆರವೇರಿದ್ದು, ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದಲ್ಲಿ ನೆಲೆಸಿರುವ ರಾಮಲಲ್ಲಾ ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ಶ್ರೀರಾಮನ ದರ್ಶನ ಪಡೆಯಲು ಇಂದಿಗೂ ಕೂಡ ಸರತಿ ಸಾಲಿನಲ್ಲಿ ನಿಂತು ಭೇಟಿ ಕೊಡುತ್ತಿರುವ ಭಕ್ತರ ಸಂಖ್ಯೆ ಕಳೆದು ಆರು ದಿನಗಳಲ್ಲಿ ಮತ್ತಷ್ಟು ಹೆಚ್ಚಿದೆ.

ಜನವರಿ 22ರಂದು ಉದ್ಘಾಟನೆಗೊಂಡ ದಿನದಿಂದ ಸುಮಾರು 19 ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜ. 23ರಂದು ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಮುಗಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಅಂದಿನಿಂದ ಕಳೆದ ಆರು ದಿನಗಳಲ್ಲಿ ಅಂದಾಜು 19 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಶ್ರೀರಾಮನ ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ.

ಮೊದಲ ದಿನವೇ 5 ಲಕ್ಷ ಜನರು ಭೇಟಿ ನೀಡಿದ್ದು, ತದನಂತರ ಭಕ್ತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ ಕಂಡುಬಂದಿದೆ. ದೇವಾಲಯಕ್ಕೆ ಆಗಮಿಸಿದ ಭಕ್ತರ ಸುರಕ್ಷತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿ ದೇವಾಲಯದ ಟ್ರಸ್ಟ್​ ಹಾಗೂ ಮಂಡಳಿಯ ಅಧಿಕಾರಿಗಳು ಭಾರೀ ಶ್ರಮಿಸುತ್ತಿದ್ದಾರೆ. ಕ್ರಮಬದ್ಧವಾದ ಸರತಿ ಸಾಲುಗಳನ್ನು ಸುಗಮಗೊಳಿಸಲು ಮತ್ತು ಸುರಕ್ಷತಾ ಮಾನದಂಡಗಳನ್ನು ನಿರ್ವಹಿಸಲು ಮತ್ತಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net