ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ?

siddaramaiah
Published on


ಮುಡಾ ಪ್ರಕರಣದ ಬಗ್ಗೆ ಬಹಳ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, 1984ರಲ್ಲಿ ಕೈಗಾರಿಕಾ ನಿವೇಶನ ಪಡೆದರು. ಸ್ವಾಧೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಸಿಐಟಿಬಿ ಇದ್ದಾಗ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ ಗೊತ್ತಾ? ಎಂದು ಜರಿದರು.


ವಾಲ್ಮೀಕಿ ಮತ್ತು ಮುಡಾ ಹಗರಣದ ಬಗ್ಗೆ ಪ್ರತಿಭಟಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಪಾದಯಾತ್ರೆ ಮಾಡಲಿ. ನಾವು ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ 84.63 ಕೋಟಿ ರೂ. ಹಗರಣವಾಗಿದೆ ಎನ್ನುವುದು ನಿಜ. ಎಸ್‌ಐಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net