ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ; ನಿರ್ದೇಶಕ ಪೃಥ್ವಿರಾಜ್ ಮೇಲೆ ಐಟಿ ಶಾಕ್! ಮಗನಿಗೆ ತಾಯಿಯ ಬೆಂಬಲ; Movie

empuran
Published on

ಇತ್ತೀಚೆಗಷ್ಟೇ ಚಿತ್ರದ ನಿರ್ಮಾಪಕ ಗೋಕುಲಂ ಗೋಪಾಲನ್ ಅವರ ಕೊಚ್ಚಿ ಮತ್ತು ಚೆನ್ನೈನಲ್ಲಿರುವ ಶ್ರೀ ಗೋಕುಲಂ ಚಿಟ್ಸ್ ಮತ್ತು ಫೈನಾನ್ಸ್‌ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದರು. ವಿದೇಶಿ ವಿನಿಮಯದಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ಅನುಮಾನದಡಿ ಗೋಪಾಲನ್ ಅವರ ವಿಚಾರಣೆಯನ್ನು ಮಾಡಲಾಗಿತ್ತು. ಈ ಬೆನ್ನಲ್ಲೇ ಇದೀಗ ನಿರ್ದೇಶಕ ಪೃಥ್ವಿರಾಜ್ ಅವರಿಗೂ ಐಟಿ ಇಲಾಖೆ ನೋಟಿಸ್ ನೀಡಿದೆ.

Movie : ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅಭಿನಯದ ಬ್ಲಾಕ್‌ ಬಸ್ಟರ್‌ ಸಿನಿಮಾ ಎಲ್‌2: ಎಂಪುರಾನ್‌ ವಿವಾದದ ಬೆನ್ನಲ್ಲೇ ಇದೀಗ ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ಅವರಿಗೂ ಆದಾಯ ತೆರಿಗೆ ಇಲಾಖೆ ನೋಟಿಸ್‌ ನೀಡಿದೆ.

ಮಾರ್ಚ್ ಕೊನೆಯ ವಾರದಲ್ಲಿ ಅಂದ್ರೆ ಚಿತ್ರ ಬಿಡುಗಡೆಯಾದ 2 ರಿಂದ 3 ದಿನದಲ್ಲಿಯೇ ಪೃಥ್ವಿರಾಜ್‌ಗೆ ಐಟಿ ಇಲಾಖೆ ನೋಟಿಸ್ ನೀಡಿದ್ದು, ಈ ಹಿಂದೆ ಪೃಥ್ವಿರಾಜ್ ನಿರ್ಮಾಣದ ಚಿತ್ರಗಳ ಆದಾಯದ ಕುರಿತು ಲೆಕ್ಕವನ್ನು ನೀಡುವಂತೆ ಕೇಳಿದೆ. ಏಪ್ರಿಲ್‌ ಅಂತ್ಯದೊಳಗೆ ಕಳೆದ ಮೂರು ಸಿನಿಮಾಗಳ ಸಂಭಾವನೆಯ ಲೆಕ್ಕ ನೀಡುವಂತೆ ಗಡುವು ನೀಡಿರುವುದಾಗಿ ತಿಳಿದು ಬಂದಿದೆ.

ಮಗನ ಪರ ನಿಂತ ತಾಯಿ:

ಪೃಥ್ವಿರಾಜ್ ಅವರ ತಾಯಿ ಹಿರಿಯ ನಟಿ ಮಲ್ಲಿಕಾ ಸುಕುಮಾರನ್, ಈ ಬೆಳವಣಿಗೆಗಳನ್ನು ಗಮನಿಸಿದ್ದು, ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ನಾವು ಯಾವುದೇ ತನಿಖೆಗೂ ಸಹ ಹೆದರುವುದಿಲ್ಲ ಎಂದು ಹೇಳಿ ಪೂರ್ಣ ವಿಶ್ವಾಸದಿಂದ ತಮ್ಮ ಮಗನ ಬೆಂಬಲಕ್ಕೆ ನಿಂತಿದ್ದಾರೆ.

ಹಿಂದಿನ ದಾಳಿಗೆ ಸಂಬಂಧಿಸಿದಂತೆ ನೋಟಿಸ್

(ಏಜೆನ್ಸೀಸ್)

ಡಿಸೆಂಬರ್ 2022ರಲ್ಲಿ ಮಲಯಾಳಂ ಚಿತ್ರರಂಗದ ಅನೇಕ ನಿರ್ಮಾಪಕರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ತೆರಿಗೆ ವಂಚನೆ, ವಿದೇಶಗಳಲ್ಲಿನ ಅನೇಕರು ಹೂಡಿಕೆ ಮಾಡಿದ್ದಾರೆ ಎಂದು ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಪೃಥ್ವಿರಾಜ್ ಸುಕುಮಾರನ್ ಮನೆ ಮತ್ತು ಕಚೇರಿಯನ್ನು ಕೂಡ ಆಗ ಪರಿಶೀಲಿಸಿದ್ದರು. ಆ ತನಿಖೆಯ ಮುಂದುವರೆದ ಭಾಗವಾಗಿ ಈಗ ಪೃಥ್ವಿರಾಜ್ ಸುಕುಮಾರನ್ ಅವರಿಗೆ ಐಟಿ ಇಲಾಖೆ ಮತ್ತೊಮ್ಮೆ ನೋಟಿಸ್ ನೀಡಿರುವುದಾಗಿ ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net