

ಮುಂಬೈ: ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ನಟಿ ದೀಪಿಕಾ ಪಡುಕೋಣೆ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಆ್ಯಕ್ಷನ್ ಜಾನರ್ ಒಳಗೊಂಡ ಫೈಟರ್ ಸಿನಿಮಾ ಕಳೆದ ತಿಂಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ ಕಂಡಿದೆ. ಜಾಗತಿಕವಾಗಿ ಚಿತ್ರ ಇಲ್ಲಿಯವರೆಗೆ 340 ಕೋಟಿ ರೂ. ಆದಾಯ ಗಳಿಸಿದೆ ಎಂದು ಇತ್ತೀಚಿನ ಸಿನಿ ವರದಿ ತಿಳಿಸಿದೆ.
ಈಗ ಚಿತ್ರವು ಒಟಿಟಿ ಪ್ಲಾಟ್ಫಾರ್ಮ್ಗೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಡಿಜಿಟಲ್ ಪ್ರೀಮಿಯರ್ಗಾಗಿ ವೀಕ್ಷಕರು ಕಾಯುತ್ತಿದ್ದಾರೆ. ಈ ಮಧ್ಯೆ ಸಿನಿಮಾ ಇದೇ ಮಾರ್ಚ್ 21ರಂದು ನೆಟ್‌ಫ್ಲಿಕ್ಸ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಅಧಿಕೃತ ದೃಢೀಕರಣ ಮಾತ್ರ ಬಾಕಿ ಉಳಿದಿದೆ.
ವಯಾಕಾಮ್ 18 ಸ್ಟುಡಿಯೋಸ್ ಮತ್ತು ಮಾರ್ಫ್ಲಿಕ್ಸ್ ಪಿಕ್ಚರ್ಸ್ ನಿರ್ಮಿಸಿದ ಈ ಸಿನಿಮಾದಲ್ಲಿ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ, ಅನಿಲ್ ಕಪೂರ್, ರಿಷಭ್ ಸಾಹ್ನಿ, ಕರಣ್ ಸಿಂಗ್ ಗ್ರೋವರ್, ಅಕ್ಷಯ್ ಒಬೆರಾಯ್ ಮುಂತಾದವರ ತಾರಾಗಣವಿದೆ. ಚಿತ್ರಕ್ಕೆ ವಿಶಾಲ್-ಶೇಖರ್ ಸಂಗೀತ ಸಂಯೋಜಿಸಿದ್ದಾರೆ,(ಏಜೆನ್ಸೀಸ್).