

ರೇವತಗಾಂವ: ಸರ್ಕಾರದ ಗ್ಯಾಂಟಿ ಯೋಜನೆಯಲ್ಲೊಂದಾದ ಶಕ್ತಿ ಯೋಜನೆಯಿಂದ ಬಸ್ಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳಕುತ್ತಿವೆ. ದೇವಾಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರ, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮಹಿಳೆಯರ ಕನಸಿಗೆ ಈ ಯೋಜನೆ ಶಕ್ತಿ ತುಂಬಿದೆ. ಕುಟುಂಬ ಸಮೇತ ಜನರು ಪ್ರಯಾಣ ಮಾಡುತ್ತಿದ್ದಾರೆ.
ಒಂದೆರಡು ಕಿಲೋಮೀಟರ್ ದೂರಕ್ಕೆ ನಡೆದುಕೊಂಡೇ ಸಾಗುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿ ಮಹಿಳೆಯರು ಬಸ್ಗಳಲ್ಲಿ ಸಂಚರಿಸುತ್ತಿದ್ದಾರೆ. ಗಾರ್ಮೆಂಟ್ ಸಹಿತ ವಿವಿಧೆಡೆ ಕೆಲಸ ಮಾಡುವ ಮಹಿಳೆಯರು ದ್ವಿಚಕ್ರ ವಾಹನಗಳನ್ನು ಬಿಟ್ಟು ಬಸ್ಗಳಲ್ಲಿ ಸಂಚರಿಸುವ ಮೂಲಕ ಇಂಧನಕ್ಕೆ ಆಗುತ್ತಿದ್ದ ರ್ಖಚನ್ನು ಕಡಿಮೆ ಮಾಡಿಕೊಂಡಿದ್ದಾರೆ.
ಪ್ರಯಾಣಿಕರ ಸಂಖ್ಯೆಗೆ ತಕ್ಕಷ್ಟು ಬಸ್ಗಳನ್ನು ಓಡಿಸದೇ ಇರುವುದರಿಂದ ನಿತ್ಯ ಜಿಲ್ಲಾ, ತಾಲೂಕು ಕೇಂದ್ರಗಳಿಂದ ಗ್ರಾಮಗಳಿಗೆ ತೆರಳುವ ಸರ್ಕಾರಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಸೀಟು ಸಿಗದೇ ಸಂಕಷ್ಟಪಡಬೇಕಾದ ಪರಿಸ್ಥಿತಿ ಎದುರಾಗಿದೆ.
ಶಾಲೆ&ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ವಿಕಲಚೇತನರು, ವೃದ್ಧರು ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಗಾಗಿ ಕಾದು ಸಮಯ ವ್ಯರ್ಥ ಮಾಡುವುದಕ್ಕಿಂತ ಹಣ ಕೊಟ್ಟು ಹೋಗಬೇಕಂದೆರೆ ಖಾಸಗಿ ಬಸ್ಗಳು ಗ್ರಾಮೀಣ ಪ್ರದೇಶಗಳಿಗೆ ಹೋಗುವುದಿಲ್ಲ ಎನ್ನುವುದು ಪ್ರಯಾಣಿಕರ ದೂರು.
ಸಾರಿಗೆ ಇಲಾಖೆ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಸಂಚಾರದ ವ್ಯವಸ್ಥೆ ಮಾಡಬೇಕು ಎಂಬುದು ಪ್ರಯಾಣಿಕರ ವಾದವಾಗಿದೆ.