ಜಗದೀಶ್ ಶೆಟ್ಟರ್​ 'ಕೈ' ಹಿಡಿಯದ ಮತದಾರ; 35 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು

Jagadeesh Shettar
Published on

ಹುಬ್ಬಳ್ಳಿ: ಬಿಜೆಪಿ ಟಿಕೆಟ್ ನೀಡದೇ ಇರುವುದಕ್ಕೆ ಕಾಂಗ್ರೆಸ್​​ನಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೀನಾಯವಾಗಿ ಸೋಲು ಕಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ವಿರುದ್ಧ 35 ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಜಗದೀಶ್ ಶೆಟ್ಟರ್ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಿ, ಗೆಲುವಿನ ​ ಉಸ್ತುವಾರಿ ಹೊತ್ತಿದ್ದ ರಜತ್ ಉಳ್ಳಾಗಡ್ಡಿ ಮಠ ಶೆಟ್ಟರ್ ಸೋಲಿನ ಬಳಿಕ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆಯೂ ನಡೆದಿದೆ. ಜಗದೀಶ್ ಶೆಟ್ಟರ್ ಸತತ ಆರು ಬಾರಿ ಬಿಜೆಪಿಯಿಂದ ಗೆಲ್ಲುವ ಮೂಲಕ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು. ಆದರೆ ಈ ಬಾರಿ ಮಾತ್ರ ಮತದಾರರ ಶೆಟ್ಟರ್ 'ಕೈ' ಬಿಟ್ಟಿದ್ದಾರೆ.

ಜಗದೀಶ್ ಶೆಟ್ಟರ್ 1994ರಿಂದಲೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾ ಬಂದಿದ್ದರು. ಶಾಸಕ, ಮಂತ್ರಿ, ಮುಖ್ಯಮಂತ್ರಿ ಹುದ್ದೇಗೇರಿದ್ದ ಶೆಟ್ಟರ್​ಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಇದರಿಂದ ಬೇಸತ್ತು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net