ಗುರಾಯಿಸಿದ ಎಂಬ ಕಾರಣಕ್ಕೆ ಹತ್ಯೆ; ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Court
Published on

ಹುಬ್ಬಳ್ಳಿ: ಗುರಾಯಿಸಿದ ಎಂಬ ಕಾರಣಕ್ಕೆ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಿಂದ ತೀರ್ಪು ಪ್ರಕಟವಾಗಿದೆ.

ಪ್ರಕರಣದ ಹಿನ್ನೆಲೆ: 2020ರ ಮಾರ್ಚ್ ನಲ್ಲಿ ಹುಬ್ಬಳ್ಳಿಯ ಪಠಾಣ ಗಲ್ಲಿಯಲ್ಲಿ, ಶಾಬುದ್ದಿನ್ ಎಂಬ ಯುವಕ ಗುರಾಯಿಸಿದ ಎಂಬ ಕಾರಣಕ್ಕೆ ಆರೋಪಿಗಳಾದ ಶಮಸುದ್ದಿನ್ ಸವಣೂರು ಮತ್ತು ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಜೈಲಾನಿ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿದ್ದರು.

ಪ್ರಕರಣ ಸಂಭಂದ ಆರೋಪಿಗಳಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ತಲಾ 1.50 ಲಕ್ಷ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ದಂಡ ಪಾವತಿಸದೇ ಇದ್ದಲ್ಲಿ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ, ದಂಡದ ಮೊತ್ತದಲ್ಲಿ 1.45 ಲಕ್ಷ ರೂ ಮೃತನ ತಂದೆ ತಾಯಿಗೆ ನೀಡಲು ನ್ಯಾಯಮೂರ್ತಿ ಆದೇಶ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net