

ರಾಣೆಬೆನ್ನೂರ: ಶ್ರಾವಣ ಮಾಸದ ಅಂಗವಾಗಿ ತಾಲೂಕಿನ ಹುಲ್ಲತ್ತಿ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಪಲ್ಲಕ್ಕಿ ಉತ್ಸವ ಮಂಗಳವಾರ ಸಂಭ್ರಮ ಸಡಗರದಿಂದ ಜರುಗಿತು.
ಗ್ರಾಮದಿಂದ ಆರಂಭವಾದ ಪಲ್ಲಕ್ಕಿ ಉತ್ಸವದ ಮೆರವಣಿಗೆ ನಗರದ ಹೊರವಲಯದ ಅಡವಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಸಹೋದರ ಸಂಗಮದ ಧಾಮಿರ್ಕ ವಿಧಿ ವಿಧಾನಗಳನ್ನು ಪೂರೈಯಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ದೇವಸ್ಥಾನಕ್ಕೆ ಬಂದು ತಲುಪಿತು. ನಂತರ ಅನ್ನಸಂತರ್ಪಣೆ ಜರುಗಿತು.
ಗ್ರಾಮಸ್ಥರು ಉಪವಾಸ ವ್ರತ ಆಚರಣೆ ಮಾಡುವ ಮೂಲಕ ದೇವರ ಕೃಪೆಗೆ ಪಾತ್ರರಾದರು.