ಸಿಎನ್‌ಸಿಯಿಂದ ಮಾನವ ಸರಪಳಿ ಜನಜಾಗೃತಿ

7...NPK..1
ನಾಪೋಕ್ಲು ವಿಲ್ಲಿ ಸಿಎನ್ ಸಿಯಿಂದ ಆಯೋಜಿಸಿದ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮಾತನಾಡಿ .
Published on

ನಾಪೋಕ್ಲು: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಸೋಮವಾರ ಇಲ್ಲಿಯ ಬಸ್ ನಿಲ್ದಾಣದಲ್ಲಿ ವಾಹನ ಸಂಚಾರ ತಡೆದು ಮಾನವ ಸರಪಳಿ ನಿರ್ಮಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು.

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತೆ ಮತ್ತು ಎಸ್‌ಟಿ ವರ್ಗೀಕರಣವು ಸೇರಿದಂತೆ 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆ ಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ಸೇರಿಸಬೇಕು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು.

ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗ ಒತ್ತಾಯಿಸಿ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ, ಕೇಟೊಳಿರ ಹರೀಶ್ ಪೂವಯ್ಯ, ಕುಂಡಿಯೊಳಂಡ ಮುದ್ದಯ್ಯ ಮುದ್ದಯ್ಯ, ಕಲಿಯಂಡ ಪ್ರಕಾಶ್ ,ಕುಲ್ಲೇಟಿರ ಅರುಣ್ ಬೆಬಾ, ಬೊಪ್ಪಂಡ ಬೊಳ್ಳಮ್ಮನಾಣಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net