ಮಾನವ ಸಂಪತ್ತು ಅನ್ಯದೇಶದ ಪಾಲು

sgr college
ಸಾಗರದಲ್ಲಿ ಆಯೋಜಿಸಿದ್ದ ಎಲ್‌ಬಿ ಮತ್ತು ಎಸ್‌ಬಿಎಸ್ ಕಾಲೇಜಿನ ವಿದ್ಯಾರ್ಥಿ ವೇದಿಕೆ ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ. ಶರತ್ ಅನಂತಮೂರ್ತಿ ಉದ್ಘಾಟಿಸಿದರು. ಎಂ.ಹರನಾಥ ರಾವ್, ಡಾ. ಎಚ್.ಎಂ.ಶಿವಕುಮಾರ್, ಡಾ. ನಿರಂಜನಮೂರ್ತಿ, ವೆಂಕಟೇಶ್ ಇತರರಿದ್ದರು.
Published on

ಸಾಗರ: ಪ್ರತಿವರ್ಷ 18 ಲಕ್ಷ ವಿದ್ಯಾರ್ಥಿಗಳು ವಿದೇಶಕ್ಕೆ ಉನ್ನತ ಶಿಕ್ಷಣಕ್ಕಾಗಿ ತೆರಳುತ್ತಿದ್ದಾರೆ. ಇದರಿಂದ ನಮ್ಮ ದೇಶದ ಅತ್ಯಮೂಲ್ಯ ಸಂಪತ್ತು ಅನ್ಯದೇಶಗಳ ಪಾಲಾಗುತ್ತಿದೆ. ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಪರಿಹಾರೋಪಾಯ ಕಂಡುಕೊಳ್ಳಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ. ಶರತ್ ಅನಂತಮೂರ್ತಿ ಹೇಳಿದರು.

ಸಾಗರದ ದೇವರಾಜ ಅರಸು ಕಲಾಭವನದಲ್ಲಿ ಶನಿವಾರ ಎಲ್‌ಬಿ ಮತ್ತು ಎಸ್‌ಬಿಎಸ್ ಕಾಲೇಜಿನ ವಿದ್ಯಾರ್ಥಿ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿರುವ ಶಿಕ್ಷಣ ಸಂಸ್ಥೆಗಳ ಮೂಲಕ ಸರ್ಕಾರ ಇಂತಹ ವಿದ್ಯಾರ್ಥಿಗಳನ್ನು ಇಲ್ಲಿಯೇ ಉಳಿಸಿಕೊಂಡು ಅಧ್ಯಯನ ಮತ್ತು ಸಂಶೋಧನೆ ಕೈಗೊಳ್ಳುವಂತೆ ಉತ್ತೇಜಿಸಬೇಕು ಎಂದರು.

ನಮ್ಮ ಶಿಕ್ಷಣ ಪದ್ಧತಿಯಲ್ಲಿಯೂ ಆಮೂಲಾಗ್ರ ಬದಲಾವಣೆ ತರಬೇಕು. ಈ ದಿನದ ಓದು, ವಿಜ್ಞಾನದ ಸಂಗತಿಗಳು ನಾಳೆಗೆ ಹಳತಾಗಿರುತ್ತದೆ. ಆದ್ದರಿಂದ ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ಜಗತ್ತಿನೊಂದಿಗೆ ಸ್ಪರ್ಧೆ ಎದುರಿಸಬೇಕಾಗುತ್ತದೆ. ನಮ್ಮಲ್ಲಿ ಶಿಕ್ಷಣದ ಬದಲಾವಣೆ ಆಗದಿದ್ದಲ್ಲಿ ಜಾಗತಿಕ ಸ್ಪರ್ಧೆಯಲ್ಲಿ ಗೆಲ್ಲುವುದು ಕನಸಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹೊರದೇಶಗಳ ಶಿಕ್ಷಣಕ್ಕಿಂತ ನಮ್ಮ ದೇಶದ ಶಿಕ್ಷಣ ಇನ್ನಷ್ಟು ಗುಣಾತ್ಮಕವಾಗಬೇಕು. ಪ್ರಾಧ್ಯಾಪಕರು ದಿನೇದಿನೆ ತಮ್ಮ ಜ್ಞಾನದ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು. ನಮ್ಮ ಸರ್ಕಾರ ವಿದ್ಯಾಸಂಸ್ಥೆಗಳ ಮೂಲಕ ವಿಜ್ಞಾನಕ್ಕೆ ಆದ್ಯತೆ ನೀಡುವ ಜತೆಗೆ ಹೊಸ ಆವಿಷ್ಕಾರಗಳ ಕುರಿತು ವಿದ್ಯಾರ್ಥಿಗಳಿಗೆ ಕುತೂಹಲ ಮೂಡಿಸುವ ಮೂಲಕ ಜಾಗತಿಕ ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವ ವಾತಾವರಣ ನಿರ್ಮಿಸಬೇಕು ಎಂದು ಹೇಳಿದರು.

ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಎಂ.ಹರನಾಥ ರಾವ್, ಡಾ. ಎಚ್.ಎಂ.ಶಿವಕುಮಾರ್, ಡಾ. ನಿರಂಜನಮೂರ್ತಿ, ವೆಂಕಟೇಶ್ ಕವಲಕೋಡು, ಡಾ. ಬಿ.ಸಿ.ಶಶಿಧರ್, ಟಿ.ಪಿ.ಅಶೋಕ್, ದಿವ್ಯಶ್ರೀ, ಡಾ. ಲಕ್ಷ್ಮೀಶ್, ಎ.ಎಸ್. ಶ್ರೇಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net