ಪದ್ಮಾವತಿ ಅಮ್ಮನವರಿಗೆ 108 ಸಿಹಿ ಪದಾರ್ಥ ಸಮರ್ಪಣೆ

humcha
Published on

ಶಿವಮೊಗ್ಗ: ಸಮೀಪದ ಶ್ರೀ ಕ್ಷೇತ್ರ ಹೊಂಬುಜದಲ್ಲಿ ಎರಡನೇ ಸಂಪತ್ ಶುಕ್ರವಾರ ವರಮಹಾಲಕ್ಷ್ಮೀ ಪೂಜೆ ನೆರವೇರಿತು. ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ, ಬಳಿಕ ಜಗನ್ಮಾತೆ ಶ್ರೀಪದ್ಮಾವತಿ ಅಮ್ಮನವರ ಸನ್ನಿಧಿಯಲ್ಲಿ ಸರ್ವಾಲಂಕಾರದೊಂದಿಗೆ ವಿಶೇಷ ಪೂಜಾ ವಿಧಾನಗಳು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ಜರುಗಿದವು. 108 ಬಗೆಯ ವಿವಿಧ ಸಿಹಿ ಪದಾರ್ಥ-ಫಲಗಳ ನೈವೇದ್ಯ ಅರ್ಪಣೆ ಮಾಡಲಾಯಿತು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಜಿನನಾಮ ಸ್ತುತಿಸಿ, ಭಕ್ತಿಕಾಣಿಕೆ ಸಮರ್ಪಿಸಿದರು. ಸಂಪ್ರದಾಯದಂತೆ ಉಡಿ ಅರ್ಪಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net