ಪ.ಪೂ. ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ

HUN-AUG-23-1(TALUK LEVEL PU TOURNMENT)
????????????????????????????????????
Published on

ಹುಣಸೂರು : ಆತ್ಮವಿಶ್ವಾಸ ದೃಢವಾಗಿ ಇದ್ದರೆ ಉನ್ನತ ಮಟ್ಟದ ಸಾಧನೆ ಸುಲಭವಾಗಲಿದೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ಅಭಿಪ್ರಾಯಪಟ್ಟರು.
ನಗರದ ಮುನೇಶ್ವರ ಕಾವಲ್ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆ ಪ್ರತಿಯೊಬ್ಬರಲ್ಲಿಯೂ ವಿಶ್ವಾಸ ಮೂಡಿಸುವ ಸಾಧನವಾಗಿದೆ. ಅಚಲ ವಿಶ್ವಾಸದಿಂದ ಮಾತ್ರ ಸಾಧನೆ ಸಾಧ್ಯವೆನ್ನುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕೆಂದು ಅವರು ಕಿವಿಮಾತು ಹೇಳಿದರು.
ಸದೃಢರಾಗಲು ಅವಕಾಶ: ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಯುವಕರಲ್ಲಿ ಶಿಸ್ತು, ಗುರಿ ಮತ್ತು ಶ್ರದ್ಧೆ ಮೈಗೂಡಿಸಿಕೊಳ್ಳುವ ಮೂಲಕ ಕಾರ್ಯಸಾಧನೆಗೆ ಅಡಿಗಲ್ಲಾಗಲಿದೆ. ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಅವಕಾಶವಿದೆ. ಈ ಕ್ಷೇತ್ರವನ್ನು ಕಡೆಗಣಿಸದೇ ಶ್ರದ್ಧೆಯಿಂದ ತೊಡಗಿಸಿಕೊಂಡು ಸ್ಥಾನ, ಬಹುಮಾನ ಗಳಿಸುವುದರೊಂದಿಗೆ ಸ್ನೇಹ ಸಂಪಾದಿಸುವ ಕೆಲಸವೂ ನಿಮ್ಮಿಂದಾಗಬೇಕು ಎಂದು ಅವರು ಆಶಿಸಿದರು. ನಮ್ಮ ನಮ್ಮ ದೈಹಿಕ ಶಕ್ತಿ ಮೇಲೆ ಮೊದಲು ನಾವು ವಿಶ್ವಾಸವಿಡಬೇಕು. ನಂತರದಲ್ಲಿ ವಿಶ್ವಾಸಾರ್ಹ ಕ್ಷೇತ್ರವನ್ನು ರೂಪಿಸುವ ವೇದಿಕೆ ತಾನಾಗಿಯೇ ನಮ್ಮ ಹತ್ತಿರ ಬರುತ್ತದೆ ಎಂದರು.
ಉಪ ವಿಭಾಗಾಧಿಕಾರಿ ಎಚ್.ಬಿ.ವಿಜಯ್‌ಕುಮಾರ್ ಮಾತನಾಡಿ, ದೈಹಿಕ ಆರೋಗ್ಯ ಉತ್ತಮವಾಗಿದ್ದರೆ ಮಾನಸಿಕ ಆರೋಗ್ಯ ಕಾಪಾಡಲು ಸಾಧ್ಯ. ಪ್ರತಿಯೊಬ್ಬರೂ ಕಾಲೇಜು ಶಿಕ್ಷಣದಲ್ಲಿ ಕ್ರೀಡೆಯೊಂದಿಗೆ ಪಠ್ಯ ಚಟುವಟಿಕೆಗೂ ಆದ್ಯತೆ ನೀಡುವುದು ಉತ್ತಮ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net