ಪತ್ನಿ ಮೇಲೆ ವಿಕೃತಿ ಮೆರೆದ ಪತಿ; ಇಂಥ ಪೈಶಾಚಿಕ ಕೃತ್ಯ ಯಾರೂ ಮಾಡಿರಲಾರರು!

House (4)
Published on

ಚಿತ್ರದುರ್ಗ: ಇಲ್ಲೊಬ್ಬ ವ್ಯಕ್ತಿ ತನ್ನ ಪತ್ನಿ ಮೇಲೇ ವಿಕೃತಿ ಮೆರೆದಿದ್ದಾನೆ. ಬಹುಶಃ ಅದ್ಯಾವ ಪತಿಯೂ ಮಾಡಿರದಂಥ ಪೈಶಾಚಿಕ ಕೃತ್ಯವನ್ನು ಈತ ಎಸಗಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ಪಾವಗಡ ರಸ್ತೆಯ ಮನೆಯಲ್ಲಿ ಈ ಘಟನೆ ನಡೆದಿದೆ. ಪತಿ ಭಾಸ್ಕರ್ ಈ ಕೃತ್ಯವೆಸಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಪತ್ನಿಯನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಭಾಸ್ಕರ್​ ಆರೋಗ್ಯ ಇಲಾಖೆಯಲ್ಲಿ ಫಾರ್ಮಾಸಿಸ್ಟ್ ಆಗಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಈತ ಪತ್ನಿಯ ಗುಪ್ತಾಂಗದ ಮೇಲೆ ವಿಕೆಟ್​​ನಿಂದ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಪತ್ನಿಯ ಶೀಲ ಶಂಕಿಸಿ ಈ ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net