ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತಿ ತಡೆದಿದ್ದಕ್ಕೆ ಪ್ರಾಣ ಕಳೆದುಕೊಂಡ ಮಹಿಳೆ

Beauty Parlour
Published on

ಮಧ್ಯಪ್ರದೇಶ: ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಆಕೆ ಪತಿ ತಡೆದಿದ್ದಕ್ಕೆ ಕೋಪಗೊಂಡ ಮಹಿಳೆ ಫ್ಯಾನ್‌ಗೆ ನೇಣು ಹಾಕಿಕೊಂಡು ಪ್ರಾಣ ಬಿಟ್ಟಿದ್ದಾಳೆ. ಈ ಘಟನೆ ನಗರದ ಇಂದೂರ್​​ನಲ್ಲಿ ಗುರುವಾರ ನಡೆದಿದೆ.

ಬ್ಯೂಟಿ ಪಾರ್ಲರ್‌ಗೆ ಹೋಗಲು ಅವಕಾಶ ನೀಡದಿದ್ದಕ್ಕೆ ಅಸಮಾಧಾನಗೊಂಡ 34 ವರ್ಷದ ಮಹಿಳೆಯೊಬ್ಬರು ಈ ಕೃತ್ಯ ಎಸಗಿದ್ದಾರೆ. ಪತಿ ಮೇಲಿನ ಸಿಟ್ಟಿಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಬ್ ಇನ್ಸ್‌ಪೆಕ್ಟರ್ ಉಮಾಶಂಕರ್ ಯಾದವ್ ತಿಳಿಸಿದ್ದಾರೆ.

ಆಕೆಯನ್ನು ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ತಡೆದಿರುವುದಾಗಿ ಆಕೆಯ ಪತಿ ಹೇಳಿದ್ದಾರೆ. ಮತ್ತು ಕೋಪದ ಭರದಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಮಹಾರಾಷ್ಟ್ರದ ಭಾಯಂದರ್‌ನಲ್ಲಿ 8 ನೇ ತರಗತಿಯ ವಿದ್ಯಾರ್ಥಿ ಕ್ಷೌರ ಮಾಡಿಸಲು ಹೋದ ವೇಳೆ ತನ್ನ ಕೂದಲನ್ನು ಚಿಕ್ಕದಾಗಿ ಕತ್ತರಿಸಲಾಗಿದೆ ಎಂದು ಮನೊಂದು ಬಾಲಕ ತನ್ನ ಫ್ಲಾಟ್‌ನ ಬಾತ್ರೂಮ್ ಕಿಟಕಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದನು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net