

ಕೊಪ್ಪಳ: ಮಲಗಿದ್ದಲ್ಲಿಯೇ ಪತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಯಾಗಿದೆ ಎಂದು ನಾಟಕವಾಡಿದ ಪತ್ನಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾಳೆ.
ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಂಡಲಗಿರಿ ಕ್ರಾಸ್ನಲ್ಲಿ ನಡೆದಿದ್ದು, ದಿನನಿತ್ಯ ಪತಿಯಿಂದ ಕಿರುಕುಳ ತಾಳಲಾರದೇ ಪತಿಯನ್ನೇ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.
ಮಂಡಲಗಿರಿ ಕ್ರಾಸ್ ನಲ್ಲಿ ಹೋಟೆಲ್ ನಡೆಸುತ್ತಿದ್ದ ಸಿದ್ದಲಿಂಗಪ್ಪ ಇಬ್ಬರ ನಡುವಿನ ಜಗಳವೇ ಕೊಲೆಗೆ ಕಾರಣ ಎನ್ನಲಾಗಿದೆ. ತನ್ನ ಪತಿಯನ್ನು ಯಾರೋ ಕೊಲೆ ಮಾಡಿದ್ದಾರೆಂದು ನಾಟಕವಾಡಿದ್ದ ಆರೋಪಿ ಶಿಲ್ಪಾ ತನಿಖೆ ವೇಳೆ ಸತ್ಯ ಬಾಯಿಬಿಟ್ಟಿದ್ದು,ಪತಿಯ ವರ್ತನೆಯೇ ಕೊಲೆಗೆ ಕಾರಣ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದು, ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.