ಹೆಂಡತಿಯ ಕತ್ತು ಕೊಯ್ದು ಕೊಂದು ಪರಾರಿಯಾದ ಗಂಡ!

robbery, investigation, delay,
Published on

ಮಂಡ್ಯ: ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕತ್ತು ಕೊಯ್ದು ಕೊಂದು ಪರಾರಿಯಾಗಿದ್ದಾನೆ. ಮಂಡ್ಯ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹುಲ್ಕೆರೆ ಗ್ರಾಮದಲ್ಲಿ ಈ ಕೊಲೆ ನಡೆದಿದ್ದು, ಸೌಮ್ಯ (24) ಕೊಲೆಗೀಡಾದ ಪತ್ನಿ. ಪತಿ ಗಣೇಶ್ (35) ಕೊಲೆ ಆರೋಪಿ. ಈತ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದು, ಬಳಿಕ ಪರಾರಿಯಾಗಿ ತಲೆಮರೆಸಿಕೊಂಡಿದ್ದಾನೆ.

ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಹಾಗೂ ಗಣೇಶ್ ಮದುವೆ ಎಂಟು ವರ್ಷಗಳ ಹಿಂದೆ ನಡೆದಿದ್ದು, ಇವರಿಗೆ ನಾಲ್ಕು ವರ್ಷದ ಮಗನಿದ್ದಾನೆ. ಕೊಲೆ ಮಾಡಲು ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ. ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಪಾಂಡವಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net