

ಆನೇಕಲ್: ಕೊಲೆ ನಡೆದ ಸ್ಥಳಕ್ಕೆ ತೆರಳಿದ್ದ ಪೊಲೀಸರಿಗೆ ಮತ್ತೊಂದು ಶವ ಸಿಕ್ಕ ಪ್ರಕರಣವೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ವೇಳೆ ಹೀಗೆ ಒಂದು ಕೊಲೆ, ಒಂದು ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು, ಈ ಎಲ್ಲದಕ್ಕೂ ಸಂಬಂಧಿತ ಒಟ್ಟಾರೆ ಹಿನ್ನೆಲೆಯು ಅನಾವರಣಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ನ ಬಿಕ್ಕನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಕೊಲೆಯೊಂದು ನಡೆದಿತ್ತು. ಇಂದು ಬೆಳಗ್ಗೆ ತಾಯಿ ಲಕ್ಷ್ಮಮ್ಮ ಅವರ ಕೊಲೆಯಾಗಿದೆ ಎಂದು ಮಧುರ ಪೊಲೀಸರಿಗೆ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಕೊಲೆ ನಡೆದಿದ್ದ ಸ್ಥಳಕ್ಕೆ ಹೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಲಕ್ಷ್ಮಮ್ಮನ ಪತಿ ವೆಂಕಟಸ್ವಾಮಿ ಇನ್ನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಆ ಬಳಿಕ ವಿಚಾರಣೆ ನಡೆಸಿದಾಗ ಒಂದೊಂದೇ ವಿಷಯ ಹೊರಬಂದಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ದಂಪತಿ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಸಾಲ ಮಾಡಿಕೊಂಡು ಆರ್ಥಿಕವಾಗಿ ಕುಗ್ಗಿದ್ದರು. ಸಾಲಕ್ಕೆ ಸಂಬಂಧಿಸಿದಂತೆ ಬ್ಯಾಂಕ್ನಿಂದ ನೋಟಿಸ್ ಬಂದಿತ್ತು. ಇದರಿಂದಾಗಿ ಇಬ್ಬರ ಮಧ್ಯೆ ಮತ್ತೆ ಗಲಾಟೆ ಆಗಿದೆ. ಈ ವೇಳೆ ಪತ್ನಿಯನ್ನು ಕೊಲೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.