ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸದ ಶಾಸಕ

29012023 bellary KC Kondaiah,
Published on

ಮಹಾತ್ಮಗಾಂಧಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಕೆ.ಸಿ.ಕೊಂಡಯ್ಯ ಆರೋಪ

ಹೂವಿನಹಡಗಲಿ: ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಕ್ಷೇತ್ರದ ಅಭಿವೃದ್ಧಿ ಮಾಡದೇ ತಮ್ಮ ಸ್ವಂತ ಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮಹಾತ್ಮಗಾಂಧಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಗೌರವಾಧ್ಯಕ್ಷ ಕೆ.ಸಿ.ಕೊಂಡಯ್ಯ ಆರೋಪಿಸಿದರು.

ಪಟ್ಟಣದ ಕಾಯಕ ಭವನದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ವರ್ಷಗಳ ಹಿಂದೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕರ ಅವರನ್ನು ಹಿರಿಯ ಮುತ್ಸದ್ದಿ ರಾಜಕಾರಣಿ ಎಂ.ಪಿ.ಪ್ರಕಾಶ ಹೂವಿನಹಡಗಲಿ ಕ್ಷೇತ್ರಕ್ಕೆ ಕರೆತಂದರು. ಮೊದಲ ಬಾರಿಯ ಚುನಾವಣೆಯಲ್ಲಿ ವಿಫಲರಾಗಿ ನಂತರ ಎರಡು ಬಾರಿ ಜನ ಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾರೆ. ಪ್ರಸ್ತುತ ದಿನಗಳಲ್ಲಿ ಭ್ರಷ್ಟ ಅಧಿಕಾರ ನಡೆಸುತ್ತ ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನೊಂದ ನಾಗರಿಕರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ನಗರದಲ್ಲಿ ಮಹಾತ್ಮಗಾಂಧಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಪ್ರಾರಂಭಿಸಿದ್ದೇವೆ. ವಿರೋಧ ಪಕ್ಷದವರನ್ನು ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದೇವೆ. ನಮ್ಮ ಪಕ್ಷದ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಭ್ರಷ್ಟಾಚಾರದಲ್ಲಿ ತೊಡಗಿ ತಮ್ಮ ಆಸ್ತಿ ದುಪ್ಪಟ್ಟು ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನತೆ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ನಗರ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ನಂದಿಹಳ್ಳಿ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಕೃಷ್ಣನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net